Breaking News

ಪ್ರತಿ ಕ್ವಿಂಟಾಲ್‌ ಹೆಸರುಕಾಳು ₹8,768, ಉದ್ದಿನಕಾಳು ₹7,800, ಸೂರ್ಯಕಾಂತಿ ₹7,721 ಬೆಂಬಲ ಬೆಲೆಯಡಿ ಖರೀದಿಸಲು ಸೂಚನೆ

Spread the love

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಗಳಿಗೆ ತಿಳಿಸಿದ್ದು, ಖರೀದಿ ಏಜನ್ಸಿಗಳೊಂದಿಗೆ ಚರ್ಚೆ ಮಾಡಿ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ.

ಬೆಂಬಲ ಬೆಲೆಯಡಿ ಖರೀದಿ: ಪ್ರತಿ ಕ್ವಿಂಟಾಲ್‌ಗೆ ಹೆಸರುಕಾಳು ರೂ.8,768, ಉದ್ದಿನಕಾಳು ರೂ.7,800, ಸೂರ್ಯಕಾಂತಿ ರೂ.7,721 ಬೆಂಬಲ ಬೆಲೆಯಡಿ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಬೆಂಬಲ ಬೆಲೆ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳಲು ವರ್ತಕರಿಗೆ ಅವಕಾಶ ನೀಡಬಾರದು. ರೈತರ ಹೆಸರಿನಲ್ಲಿ ಮಾರಾಟ ಮಾಡಲು ಬರುವ ವರ್ತಕರ ಬಗ್ಗೆ ಎಚ್ಚರಿಕೆ ವಹಿಸಬೇಕು ಹಾಗೂ ಅವರಿಂದ ಖರೀದಿ ಮಾಡಬಾರದು ಎಂದು ಸಚಿವರು ತಿಳಿಸಿದ್ದಾರೆ.

ಈ ಜಿಲ್ಲೆಗಳಲ್ಲಿ ಈ ಮೂರು ಧಾನ್ಯಗಳ ಖರೀದಿ: ಗದಗ, ಧಾರವಾಡ, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್‌, ತುಮಕೂರು, ಹಾಸನ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹೆಸರುಕಾಳು, ಕಲಬುರಗಿ, ಬೀದರ್‌, ಯಾದಗಿರಿ, ಗದಗ, ಧಾರವಾಡ, ವಿಜಯಪುರ ಬಾಗಲಕೋಟ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಉದ್ದಿನಕಾಳು ಹಾಗೂ ಬಾಗಲಕೋಟೆ, ಬಳ್ಳಾರಿ, ಚಾಮರಾಜ ನಗರ, ಚಿತ್ರದುರ್ಗ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಮೈಸೂರು, ಚಿಕ್ಕಮಗಳೂರು, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ