Breaking News

ನೀಟ್​ ಪರೀಕ್ಷೆಯ ಫಲಿತಾಂಶದ ಬಳಿಕ ಜಾತಿ ಬದಲಾಯಿಸಲು ಅವಕಾಶವಿಲ್ಲ: ಹೈಕೋರ್ಟ್ ಸ್ಪಷ್ಟನೆ

Spread the love

ಬೆಂಗಳೂರು: ವೈದ್ಯಕೀಯ ಸ್ನಾತಕ ಅಥವಾ ಸ್ನಾತಕೋತ್ತರ ಪದವಿಯ ಪ್ರವೇಶಕ್ಕೆ ನಡೆಯುವ ನೀಟ್​​​​ ಪರೀಕ್ಷೆಗೆ ಸಲ್ಲಿಸುವ ಅರ್ಜಿಗಳಲ್ಲಿ ಜಾತಿ ಸೇರಿದಂತೆ ಇತರೆ ಗೊಂದಲಗಳ ತಿದ್ದುಪಡಿಗೆ ಅವಕಾಶ ಕಲ್ಪಿಸಿದ್ದ ಸಂದರ್ಭದಲ್ಲಿ ಸರಿಪಡಿಸಿಕೊಳ್ಳದೆ, ಫಲಿತಾಂಶದ ಬಳಿಕ ಮೀಸಲು ವರ್ಗ ಬದಲಾಯಿಸಲು ಕೋರುವುದಕ್ಕೆ ಅವಕಾಶ ಇರುವುದಿಲ್ಲ ಎಂದು ಹೈಕೋರ್ಟ್​ ಸ್ಪಷ್ಟಪಡಿಸಿದೆ.

ನೇಕಾರ ಸಮುದಾಯಕ್ಕೆ ಸೇರಿದ್ದು ಅರ್ಜಿಯಲ್ಲಿ ಸಾಮಾನ್ಯ ವರ್ಗ ಎಂಬುದಾಗಿ ನಮೂದಿಸಲಾಗಿದೆ. ತನ್ನನ್ನು ಹಿಂದುಳಿದ ವರ್ಗಗಳ ಪಟ್ಟಿಯಡಿ ಪರಿಗಣಿಸಬೇಕು ಎಂದು ಕೋರಿ ವೈದ್ಯಕೀಯ ಸ್ನಾತಕೋತ್ತರ ಪದವಿಯ ಆಕಾಂಕ್ಷಿ ಡಾ.ಸಿ.ಎನ್​. ಅನುಷಾ ಎಂಬುವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ. ಸಿಂಗ್​ ಮತ್ತು ವೆಂಕಟೇಶ್​ ಟಿ.ನಾಯ್ಕ್​ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಅರ್ಜಿಯಲ್ಲಿ ಯಾವುದೇ ಹುರಳಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಅಲ್ಲದೆ, ಅರ್ಜಿದಾರರ ಪರ ವಕೀಲರು ಈ ಹಿಂದೆ ಹೈಕೋರ್ಟ್​ನ ಮತ್ತೊಂದು ಪೀಠ ನೀಡಿರುವ ಎರಡು ಪ್ರಕರಣಗಳನ್ನು ಉಲ್ಲೇಖಿಸಿ, ಅರ್ಜಿದಾರರ ಮನವಿಯನ್ನು ಪರಿಗಣಿಸಬೇಕು ಎಂದು ಕೋರಿದ್ದರು. ಆದರೆ ಆ ಎರಡೂ ಪ್ರಕರಣಗಳಲ್ಲಿ ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನ ಹೈಕೋರ್ಟ್​ ಮೆಟ್ಟಿಲೇರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ