ಯಾರು ಸಹ ಭಯ ಪಡುವ ಅವಶ್ಯಕತೆ ಇಲ್ಲಾ: ಪ್ರವಾಹ ಸಂತ್ರಸ್ತರಿಗೆ ಅಭಯ ನೀಡಿದ ಸಚಿವ ಎಂ.ಬಿ.ಪಾಟೀಲ
ವಿಜಯಪುರ ಜಿಲ್ಲೆಯ ಭೀಮಾತೀರದಲ್ಲಿ ಉಂಟಾಗಿರುವ ಪ್ರವಾಹಪೀಡಿತ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದರು.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ
ದೇವರನಾವದಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಸಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಳಜಿ ಕೇಂದ್ರಗಳಲ್ಲಿ ಕಲ್ಪಿಸಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ಮಾದ್ಯಮಗಳ ಜೊತೆಗೆ ಮಾತನಾಡಿದರು. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ.
ಯಾರು ಸಹ ಭಯ ಪಡುವ ಅವಶ್ಯಕತೆ ಇಲ್ಲಾ, ಜಿಲ್ಲಾಡಳಿತ ನಿಮ್ಮ ಜೊತೆಗಿದ್ದು, ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದರು. ಯಾವುದೇ ಜನ ಜಾನುವಾರಗಳ ಪ್ರಾಣ ಹಾನಿಯಾಗದಂತೆ ಎಲ್ಲಾ ರೀತಿಯ ಸಕಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮನೆಗಳಿಗೆ ನೀರು ನುಗ್ಗಿದ ತಕ್ಷಣವೇ ಅಧಿಕಾರಿಗಳು ಕಾಳಜಿ ಕೇಂದ್ರಕ್ಕೆ ನಮ್ಮನ್ನು ಸ್ಥಳಾಂತರಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿರುತ್ತಾರೆ. ಸಂತ್ರಸ್ತರಿಗೆ ಊಟೋಪಹಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಸಚಿವ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಮಸಗಿ ಗ್ರಾಮದ ಹತ್ತಿರ ಹರಿಯುವ ಭೀಮಾ ನದಿ ತೀರಕ್ಕೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿಯ ಕುರಿತು ಅವಲೋಕಿಸಿದರು.
Laxmi News 24×7