Breaking News

ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಿಡಿಎ ನಿವೇಶನ ನೋಂದಣಿ: ಬಿಡಿಎ ನಿವೃತ್ತ ಸಹಾಯಕನ ಸಹಿತ ಮೂವರ ಬಂಧನ

Spread the love

ಬೆಂಗಳೂರು: ಮೂಲ ಮಾಲೀಕನ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಕೆ ಮಾಡಿ ಬಿಡಿಎ ನಿವೇಶನ ನೋಂದಣಿ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಿಡಿಎನ ನಿವೃತ್ತ ವಿಶೇಷ ಸಹಾಯಕ ಚಿಕ್ಕರಾಯಿ ಕೆ.ಎನ್​. (62), ಮುರುಳೀಧರ್ (60) ಹಾಗೂ ಮಂಜುನಾಥ್ (48) ಬಂಧಿತ ಆರೋಪಿಗಳು. ಬೆಂಗಳೂರು‌ ಅಭಿವೃದ್ಧಿ ಪ್ರಾಧಿಕಾರದ ವಿಜಿಲೆನ್ಸ್ ಅಧಿಕಾರಿಗಳು ನೀಡಿದ ದೂರಿನನ್ವಯ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರ್ಕಾವತಿ ಬಡಾವಣೆಯ 2ನೇ ಬ್ಲಾಕ್‌ನಲ್ಲಿರುವ 40×60ರ ನಿವೇಶನ 2006ರಲ್ಲಿ ಬೈಲಪ್ಪ ಎಂಬುವರಿಗೆ ಹಂಚಿಕೆಯಾಗಿತ್ತು. ನಂತರ ಆ ನಿವೇಶನಕ್ಕೆ ಬದಲಿಯಾಗಿ ನಾಡಪ್ರಭು ಕೆಂಪೇಗೌಡ ಬಡಾವಣೆಯ 3ನೇ ಬ್ಲಾಕ್‌ನಲ್ಲಿರುವ ನಿವೇಶನವನ್ನು 2018ರಲ್ಲಿ ಮಂಜೂರು ಮಾಡಲಾಗಿತ್ತು. ಈ ನಡುವೆ 2019ರಲ್ಲಿ ಬೈಲಪ್ಪ ಅವರು ಮೃತಪಟ್ಟಿದ್ದರು.

ಆದ್ದರಿಂದ ನಿವೇಶನದ ಹಕ್ಕು ವರ್ಗಾವಣೆ ಕೋರಿ ಅವರ ಪತ್ನಿ ಲಕ್ಷ್ಮೀದೇವಮ್ಮ ಅವರು ಬಿಡಿಎಗೆ ಅರ್ಜಿ ಸಲ್ಲಿಸಿದ್ದರು. ಆದರೆ ಬಿಡಿಎ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದಾಗ ನಕಲಿ ವ್ಯಕ್ತಿಯೊಬ್ಬ ತಾನೇ ಮೂಲ ಹಂಚಿಕೆದಾರ ಎಂದು ಅರ್ಜಿ ಸಲ್ಲಿಸಿ ಕೆಂಪೇಗೌಡ ಬಡಾವಣೆಯಲ್ಲಿಯೇ ಬದಲಿ ನಿವೇಶನ ಪಡೆದು ನೋಂದಣಿ ಮಾಡಿಕೊಂಡಿರುವುದು ಕಂಡುಬಂದಿತ್ತು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ