ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿಯ ಯು.ಜಿ.ಎಚ್.ಪಿ.ಎಸ್ (ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ)ಯ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಮ್ಮ ಅವರು ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯವನ್ನು ಕೇವಲ 7 ದಿನಗಳಲ್ಲಿಯೇ ಪೂರ್ಣಗೊಳಿಸಿ ಶೇ.100ರಷ್ಟು ಸಾಧನೆ ಮಾಡಿದ್ದಾರೆ.
ಇಂದು ಅವರನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ತಮ್ಮ ಕಚೇರಿಯಲ್ಲಿ ಅಭಿನಂದಿಸಿ, ವೈಯ್ಯಕ್ತಿವಾಗಿ 1,001 ರೂ.ಗಳ ನಗದು ಬಹುಮಾನ ನೀಡಿ ಶ್ರೀಮತಿ ಶಾಂತಮ್ಮ ಅವರ ಕಾರ್ಯವನ್ನು ಪ್ರಶಂಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಅಭಿನಂದನಾ ಪತ್ರ ನೀಡಿರುವ ಜಿಲ್ಲಾಧಿಕಾರಿಗಳು, ಸಮೀಕ್ಷೆಗಾಗಿ ಚನ್ನಪಟ್ಟಣ ತಾಲೂಕಿನ ಹೊಡಿಕೆ ಹೊಸಹಳ್ಳಿ, ಚನ್ನಂಕೇಗೌಡನದೊಡ್ಡಿ ಹಾಗೂ ಗೋವಿಂದೇಗೌಡನದೊಡ್ಡಿಯಲ್ಲಿ 86 ಮನೆಗಳ ಸಮೀಕ್ಷಾ ಕಾರ್ಯವನ್ನು ಕೇವಲ 7 ದಿನಗಳಲ್ಲಿಯೇ ಶೇ. 100 ರಷ್ಟು ಪೂರ್ಣಗೊಳಿಸಿ ನಿಗದಿತ ಅವಧಿಗೂ ಮೊದಲೇ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿದ್ದಾರೆ.
ಸಮೀಕ್ಷೆಯಲ್ಲಿ ನೀವು ತೋರಿದ ಆಸಕ್ತಿ, ಉತ್ಸಾಹ ಮತ್ತು ಪ್ರಾಮಾಣಿಕ ಪ್ರಯತ್ನವು ಸಮೀಕ್ಷೆ ಕಾರ್ಯ ತ್ವರಿತವಾಗಿ ಸಾಗಲು ಸಹಕಾರಿಯಾಗಿದೆ. ಸಮೀಕ್ಷಾ ಕಾರ್ಯಕ್ಕೆ ನೀವು ನೀಡಿದ ಸಹಕಾರ ಮತ್ತು ಉತ್ಸಾಹವನ್ನು ಜಿಲ್ಲಾಡಳಿತವು ಪ್ರಶಂಸಿಸುತ್ತದೆ. ಹಾಗೂ ತಮ್ಮ ಈ ಕಾರ್ಯಶ್ರದ್ಧೆಗೆ ನನ್ನ ಸ್ವಂತ ಹಣದಿಂದ ಸ್ವ ಇಚ್ಚೆಯಾಗಿ 1,001 ರೂ.ಗಳನ್ನು ನೀಡಿ ಶ್ಲಾಘಿಸಲಾಗಿದೆ ಎಂದರು.
Laxmi News 24×7