ಬೆಂಗಳೂರು : ಇಬ್ಬರು ವಿದೇಶಿ ಪ್ರಜೆಗಳ ಸಹಿತ 7 ಜನ ಆರೋಪಿಗಳನ್ನ ಬಂಧಿಸಿರುವ ಬೆಂಗಳೂರು ಪೊಲೀಸರು ಬರೋಬ್ಬರಿ 9.93 ಕೋಟಿ ರೂ ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನ ಜಪ್ತಿ ಮಾಡಿದ್ದಾರೆ. ಒಟ್ಟು 3 ಕೆ.ಜಿ 858 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 41 ಗ್ರಾಂ ಎಕ್ಸ್ಟಸಿ ಪಿಲ್ಸ್, 1 ಕೆ.ಜಿ 82 ಗ್ರಾಂ ಹೈಡ್ರೋಗಾಂಜಾ, 6 ಕೆ.ಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ 1 ಕಾರು ಮತ್ತು 1 ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ಪದಾರ್ಥಗಳನ್ನ ಮಾರಾಟ ಮಾಡುತ್ತಿದ್ದ ಸಾಫ್ಟ್ವೇರ್ ಉದ್ಯೋಗಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೆವಿನ್ ರೋಜರ್ ಬಂಧಿತ ಆರೋಪಿಯಾಗಿದ್ದು, ಮೋಜಿನ ಜೀವನ ನಡೆಸಲು ಹಾಗೂ ಅಧಿಕ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕೇರಳದಿಂದ ಕಡಿಮೆ ಬೆಲೆಗೆ ಹೈಡ್ರೋಗಾಂಜಾ ತಂದು ಬೆಂಗಳೂರಿನಲ್ಲಿ ಪರಿಚಯದ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ. ಆತನಿಂದ 500 ಗ್ರಾಂ ಹೈಡ್ರೋಗಾಂಜಾ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ ಒಂದು ಕಾರು, ಒಂದು ಬೈಕ್ ಹಾಗೂ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Laxmi News 24×7