Breaking News

ಮಲ್ಟಿಫ್ಲೆಕ್ಸ್​ಗಳಲ್ಲಿ 200 ರೂ ನಿಗದಿಗೆ ತಡೆ ಆದೇಶ ಪ್ರಶ್ನಿಸಿದ ಮೇಲ್ಮನವಿ ಇಂದು ವಿಚಾರಣೆ

Spread the love

ಬೆಂಗಳೂರು: ಮಲ್ಟಿಫ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ ಏಕರೂಪದ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ತಡೆ ನೀಡಿರುವ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದ್ದು, ಇಂದು ವಿಚಾರಣೆಗೆ ಬರಲಿದೆ.

ಕರ್ನಾಟಕ ಸಿನಿಮಾ ನಿಯಂತ್ರಣ (ತಿದ್ದುಪಡಿ) ನಿಯಮಗಳು-2025 ಅಡಿ ನಿಯಮ 55(6)ರ ನಿಯಮಕ್ಕೆ ಹೈಕೋರ್ಟ್​ನ ಏಕ ಸದಸ್ಯ ಪೀಠವು ಸೆಪ್ಟೆಂಬರ್ 23ರಂದು ನೀಡಿರುವ ತಡೆ ತೆರವು ಮಾಡುವಂತೆ ಕೋರಿ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕನ್ನಡ ಸಿನಿಮಾ ನಿರ್ಮಾಪಕರ ಸಂಘ ಸೇರಿದಂತೆ ಎಂಟು ಸಿನಿಮಾ/ಕನ್ನಡ ಸಂಘಟನೆಗಳು ಹಾಗೂ 33 ವ್ಯಕ್ತಿಗಳು ಹಾಗೂ ಶ್ರೀವಾರಿ ಟ್ಯಾಕೀಸ್ ಮೇಲ್ಮನವಿ ಸಲ್ಲಿಸಿವೆ.

ನ್ಯಾಯಮೂರ್ತಿಗಳಾದ ಸೂರಜ್ ಗೋವಿಂದರಾಜ್ ಮತ್ತು ಕೆ.ರಾಜೇಶ್ ರೈ ಅವರ ರಜಾಕಾಲೀನ ವಿಭಾಗೀಯ ಈ ಅರ್ಜಿಗಳ ವಿಚಾರಣೆ ನಡೆಸಲಿದೆ.

ಅರ್ಜಿಯಲ್ಲಿ ಮಲ್ಟಿಪ್ಲೆಕ್ಸ್ ಅಸೋಸಿಯೇಶನ್ ಆಫ್ ಇಂಡಿಯಾ, ಪಿವಿಆರ್ ಐನಾಕ್ಸ್ ಲಿಮಿಟೆಡ್​​ನ ಷೇರುದಾರ ಸಂತನು ಪೈ, ಸಿನಿಪ್ಲೆಕ್ಸ್ ಪ್ರೈವೇಟ್ ಲಿಮಿಟೆಡ್, ಕೀ ಸ್ಟೋನ್ ಎಂಟರ್ಪ್ರೈಸಸ್, ಹೊಂಬಾಳೆ ಫಿಲ್ಮ್ಸ್ ಎಲ್ಎಲ್ಪಿ, ವಿ ಕೆ ಫಿಲ್ಮ್ಸ್ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಸೆಪ್ಟೆಂಬರ್ 23ರಂದು ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ಪೀಠವು ಅನುಕೂಲತೆಯ ಸಮಾನತೆಯ ಪರೀಕ್ಷೆಯ ಅನ್ವಯ ಸರ್ಕಾರದ ತಿದ್ದುಪಡಿ ನಿಯಮಕ್ಕೆ ತಡೆ ನೀಡಿದ್ದರು. ಅರ್ಜಿದಾರರು ರಿಟ್ ಅರ್ಜಿಯಲ್ಲಿ ಯಶಸ್ಸು ಕಂಡರೆ ಶಾಶ್ವತವಾಗಿ ತಮ್ಮ ಗಳಿಕೆಯನ್ನು ಕಳೆದುಕೊಳ್ಳಲಿದ್ದಾರೆ. ತಿದ್ದುಪಡಿ ನಿಯಮಕ್ಕೆ ತಡೆ ನೀಡಿದರೆ ಮತ್ತು ಅರ್ಜಿದಾರರು ಅಂತಿಮವಾಗಿ ನಷ್ಟ ಅನುಭವಿಸಿದರೆ ಗಳಿಸಿರುವ ಹಣಕ್ಕೆ ಸಂಬಂಧಿಸಿದಂತೆ ಸೂಕ್ತ ಆದೇಶ ಮಾಡಬಹುದು. ಹೀಗಾಗಿ, ತಿದ್ದುಪಡಿ ನಿಯಮಗಳಿಗೆ ಮುಂದಿನ ಆದೇಶದವರೆಗೆ ತಡೆ ನೀಡಲಾಗಿದೆ ಎಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಇದೀಗ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ