Breaking News

ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರಿಗೆ ಶಾಕ್ ನೀಡಿದ ಖಾಸಗಿ ಬಸ್​ಗಳು, ಕೆಎಸ್​ಆರ್​ಟಿಸಿ

Spread the love

ಬೆಂಗಳೂರು, ಸೆಪ್ಟೆಂಬರ್ 30: ಬುಧವಾರ ಆಯುಧಪೂಜೆ, ಗುರುವಾರ ವಿಜಯದಶಮಿ (Vijaya Dashami). ಶುಕ್ರವಾರ ಒಂದು ದಿನ ರಜೆ ಹಾಕಿದರೆ ಮತ್ತೆ ವಾರಾಂತ್ಯ. ಸಾಲು ಸಾಲು ರಜೆ ಬಂದಿದ್ದು, ಜನರೆಲ್ಲ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ಅದರಲ್ಲೂ, ದಸರಾ ಕಣ್ತುಂಬಿಕೊಳ್ಳಲು ಬೆಂಗಳೂರಿನಿಂದ ನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಆದರೆ, ಕೆಎಸ್​​ಆರ್​ಟಿಸಿ (KSRTC) ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು-ಮೈಸೂರು ಬಸ್​ ಟಿಕೆಟ್​ ದರ (Bus Ticket Price) ಹೆಚ್ಚಳವಾಗಿದೆ.

ಬೆಂಗಳೂರು ಮೈಸೂರು ಬಸ್ ಟಿಕೆಟ್ ದರ ಹೆಚ್ಚಳ

ಬೆಂಗಳೂರಿನಿಂದ ಮೈಸೂರಿಗೆ ತೆರಳಲು ಇದ್ದ ಬಸ್​ ಟಿಕೆಟ್​ ದರದಲ್ಲಿ, 20 ರೂ. ಏರಿಕೆ ಮಾಡಲಾಗಿದೆ. ಕೆಎಸ್ಆರ್​ಟಿಸಿ ತಡೆರಹಿತ ಬಸ್ ಟಿಕೆಟ್​​ ದರ 210 ರೂ. ಇದ್ದದ್ದು ಇದೀಗ 230 ರೂ.ಗೆ ಏರಿಕೆ ಆಗಿದೆ. ಸಾಮಾನ್ಯ ಬಸ್ ಟಿಕೆಟ್ ದರ 161 ರೂ.ಗಳಿಂದ 180 ರೂ.ಗೆ ಏರಿಕೆ ಆಗಿದೆ. ದಸರಾ ಹಿನ್ನೆಲೆಯಲ್ಲಿ ಕೆಎಸ್​ಆರ್​ಟಿಸಿ 20 ರೂಪಾಯಿ ದರ ಏರಿಕೆ ಮಾಡಿದೆ.

ಕೆಎಸ್​​​ಆರ್​ಟಿಸಿ ಮಾತ್ರವಲ್ಲ, ಖಾಸಗಿ ಬಸ್​​ಗಳು ಕೂಡ ಹಬ್ಬವನ್ನೇ ನೆಪವಾಗಿ ಇಟ್ಟುಕೊಂಡು ಪ್ರಯಾಣ ದರ ಏರಿಕೆ ಮಾಡಿವೆ.

ಖಾಸಗಿ ಬಸ್​​​ ಬಸ್ ಟಿಕೆಟ್ ದರ ಏರಿಕೆ: ಯಾವ ಊರಿಗೆ ಎಷ್ಟು?

ಬೆಂಗಳೂರಿಂದ ಹುಬ್ಬಳ್ಳಿಗೆ ಸಾಮಾನ್ಯವಾಗಿ ಖಾಸಗಿ ಬಸ್​ ಪ್ರಯಾಣದರ 1000 ರೂಪಾಯಿ ಇರುತ್ತಿತ್ತು. ಆದೀಗ, 2039 ರೂಪಾಯಿ ಆಗಿದೆ. ಇನ್ನು, ದಾವಣಗೆರೆಗೆ ತೆರಳಲು 750 ರೂಪಾಯಿ ಟಿಕೆಟ್ ದರ ಇತ್ತು. ಈಗ 1489 ರೂಪಾಯಿಗೆ ಹೆಚ್ಚಳ ಮಾಡಿದ್ದಾರೆ. ಬೆಂಗಳೂರಿಂದ ಬೆಳಗಾವಿಗೆ 1200 ರೂಪಾಯಿ ಇರುತ್ತಿದ್ದ ಬಸ್​ ಟಿಕೆಟ್ ದರ ಈಗ 2677 ರೂಪಾಯಿ ತನಕ ಏರಿಕೆ ಆಗಿದೆ. ಬೆಂಗಳೂರಿಂದ ಮಂಗಳೂರಿಗೆ ಸಾಮಾನ್ಯ ದಿನಗಳಲ್ಲಿ 1200 ರೂಪಾಯಿ ಇರುತ್ತಿತ್ತು. ಈಗ, 1800 ರೂಪಾಯಿ ಆಗಿದೆ. ಇನ್ನು, ಬೆಂಗಳೂರಿಂದ ಕಲಬುರಗಿಗೆ 1100 ರೂ. ಇದ್ದ ಬಸ್​ ಟಿಕೆಟ್​ ದರ ಈಗ 2299 ರೂಪಾಯಿ ಆಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ