Breaking News

ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು

Spread the love

ಬೆಂಗಳೂರು: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಉಸಿರಾಟದ ತೊಂದರೆ ಹಾಗೂ ಜ್ವರ ಕಾಣಿಸಿಕೊಂಡ ಕಾರಣ ಮಂಗಳವಾರ ಸಂಜೆ ಖರ್ಗೆ ಅವರನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಆಗಮಿಸುತ್ತಿದ್ದಂತೆ ಹಿರಿಯ ವೈದ್ಯರು, ಹಲವು ಪರೀಕ್ಷೆಗಳನ್ನು ನಡೆಸಿದರು. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸದ್ಯ ಜನರಲ್ ವಾರ್ಡ್​ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಖರ್ಗೆಯವರಿಗೆ ವೈದ್ಯರು ನಿತ್ಯದ ಚೆಕ್ ಅಪ್ ಮಾಡಿಸಿದ್ದಾರೆ.

ಆತಂಕ ಪಡುವ ಅಗತ್ಯ ಇಲ್ಲ: ಖರ್ಗೆ ಅವರ ಆರೋಗ್ಯದ ಸ್ಥಿತಿಗತಿ ಬಗ್ಗೆ ಹೆಚ್ಚಿನ ವಿವರಗಳೊಂದಿಗೆ ಆರೋಗ್ಯ ಬುಲೆಟಿನ್ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 82 ವರ್ಷದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಏರುಪೇರಿನಿಂದ ಆಸ್ಪತ್ರೆಗೆ ದಾಖಲಾಗಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕಳವಳ ಉಂಟಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ತಮ್ಮ ತವರು ಜಿಲ್ಲೆ ಕಲಬುರಗಿ ಸೇರಿದಂತೆ ಕಲ್ಯಾಣ-ಕರ್ನಾಟಕ ಪ್ರದೇಶದಲ್ಲಿ ಪ್ರವಾಹದಿಂದ ಹಾನಿಗೊಳಗಾದ ಜನರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಅಲ್ಲದೇ ಪ್ರವಾಹ ಪೀಡಿತರಿಗೆ ಪರಿಹಾರ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ವಿವರವಾದ ಪತ್ರ ಬರೆಯುವುದಾಗಿಯೂ ಅವರು ಹೇಳಿದ್ದರು.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ