Breaking News

ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿನ ಮೇಲೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆ ಮಾಡಿದರು.

Spread the love

ಮೈಸೂರು: ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿನ ಮೇಲೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆ ಮಾಡಿದರು.

ಅಂಬಾವಿಲಾಸ ಅರಮನೆ ಆವರಣದಲ್ಲಿ ಸಂಜೆ 4.42 ರಿಂದ 5.06 ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಶಿವರಾಜ ಎಸ್.ತಂಗಡಗಿ, ಯದುವಂಶಸ್ಥ, ಸಂಸದರೂ ಆಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೇರಿದಂತೆ ಮತ್ತಿತರರು ಪುಷ್ಪಾರ್ಚನೆ ಮಾಡಿದರು.ಕ್ಯಾಪ್ಟನ್​ ಅಭಿಮನ್ಯು ಆನೆ ಅರಮನೆ ಬಳಿಯಿಂದ ಚಿನ್ನದ ಅಂಬಾರಿಯನ್ನು ಹೊತ್ತು ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಬಂಬೂ ಬಜಾರ್ ಮೂಲಕ ಬನ್ನಿಮಂಟಪದವರೆಗೆ ಸುಮಾರು 5 ಕಿ.ಮೀ. ದೂರ ಸಾಗುತ್ತಿದೆ. ಜಂಬೂ ಸವಾರಿಗೆ ಆಕರ್ಷಕ ಸ್ತಬ್ಧ ಚಿತ್ರಗಳು ಹಾಗೂ ಕಲಾತಂಡಗಳು ಸಾಥ್​ ನೀಡುವ ಮೂಲಕ ಮೆರವಣಿಗೆಯನ್ನು ಮತ್ತಷ್ಟು ಮೆರುಗುಗೊಳಿವೆ. ಜಂಬೂ ಸವಾರಿಯೊಂದಿಗೆ 11 ದಿನಗಳ ದಸರಾ ವೈಭವಕ್ಕೆ ತೆರೆ ಬೀಳಲಿದೆ.


Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ