Breaking News

ಬ್ರಿಟನ್‍ನಿಂದ ರಿಟರ್ನ್ ಆದ ಗೋವಾ ಶಾಸಕನಿಗೆ ಕ್ವಾರಂಟೈನ್‍

Spread the love

ಪಣಜಿ, ಡಿ.27- ಬ್ರಿಟನ್‍ನಿಂದ ಬಂದ ಗೋವಾ ಶಾಸಕನನ್ನು ಪರೀಕ್ಷೆಗೊಳಪಡಿಸಿ ಕ್ವಾರಂಟೈನ್‍ನಲ್ಲಿಡಲಾಗಿದೆ. ಪಕ್ಷೇತರ ಶಾಸಕ ರೋಹನ್ ಖೌಂಟೆ ಅವರು ಕೆಲವು ದಿನಗಳ ಹಿಂದೆ ಬ್ರಿಟನ್‍ಗೆ ಪ್ರವಾಸಕ್ಕೆ ತೆರಳಿ ಇಂದು ಬೆಳಗ್ಗೆ ಮರಳಿದ್ದರು. ತಕ್ಷಣ ಅವರನ್ನು ಪರೀಕ್ಷೆಗೊಳಪಡಿಸಲು ಮುಂದಾದಾಗ ಅವರು ಅಲ್ಲಿಂದ ನಿರ್ಗಮಿಸಿದರು.
ಇದರಿಂದಾಗಿ ಅವರನ್ನು ಕೂಡಲೇ ವಶಕ್ಕೆ ಪಡೆದು ಪರೀಕ್ಷೆಗೊಳಪಡಿಸಬೇಕೆಂದು ಕೆಲ ರಾಜಕೀಯ ಪಕ್ಷಗಳ ಮುಖಂಡರು ಒತ್ತಾಯಿಸಿದ್ದರು.ಈಗಾಗಲೇ ಬ್ರಿಟನ್‍ನಲ್ಲಿ ರೂಪಾಂತರ ಕೊರೊನಾ ಬಂದಿರುವುದರಿಂದ ಯಾರೇ ಆದರೂ ಅವರನ್ನು ಪರೀಕ್ಷೆಗೊಳಪಡಿಸಬೇಕು ಮತ್ತು ಇವರು ಅಲ್ಲಿಂದ ಹೇಗೆ ಬಂದರು ಎಂಬುದರ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಕೂಡಲೇ ಪ್ರತಿಕ್ರಿಯೆ ನೀಡಿದ್ದು, ಅವರನ್ನು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ವೈಯಕ್ತಿಕವಾಗಿ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈಗಾಗಲೇ ಗೋವಾಕ್ಕೆ 900ಕ್ಕೂ ಹೆಚ್ಚು ಜನರು ಆಗಮಿಸಿದ್ದು, ಅವರನ್ನುಪರೀಕ್ಷೆಗೊಳಪಡಿಸಲಾಗಿದೆ. ಈಗಾಗಲೇ 11 ಮಂದಿಗೆ ಕೊರೊನಾ ಪತ್ತೆಯಾಗಿದ್ದು, ಅವರಿಗೆ ಬ್ರಿಟನ್‍ನಲ್ಲಿ ಕಾಣಿಸಿಕೊಂಡಿರುವ ಸೋಂಕು ಇದಾಗಿದೆಯೇ ಎಂಬುದನ್ನು ತಿಳಿದುಕೊಳ್ಳಲು ಅವರ ಗಂಟಲು ದ್ರವವನ್ನು ಪೂನಾದ ಸಂಶೋಧನಾಲಯಕ್ಕೆ ಕಳುಹಿಸಲಾಗಿದೆ. ವರದಿಯನ್ನು ನಿರೀಕ್ಷಿಸಲಾಗಿದೆ.

Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ