Breaking News

ಅಧಿಕಾರ ಹಸ್ತಾಂತರ ಹೇಳಿಕೆ: ರಂಗನಾಥ್, ಎಲ್.ಆರ್. ಶಿವರಾಮೇಗೌಡಗೆ ನೋಟಿಸ್

Spread the love

ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಪರೋಕ್ಷ ಹೇಳಿಕೆ ನೀಡಿರುವ ಕುಣಿಗಲ್​ ಕ್ಷೇತ್ರದ ಶಾಸಕ ಡಾ. ರಂಗನಾಥ್ ಮತ್ತು ಎಲ್. ಆರ್. ಶಿವರಾಮೇಗೌಡಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ನೋಟಿಸ್ ನೀಡಿದೆ.

ರಾಜ್ಯ ಕಾಂಗ್ರೆಸ್​ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಇಬ್ಬರು ಕಾಂಗ್ರೆಸ್ ನಾಯಕರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಕಣಿಗಲ್ ಕೈ ಶಾಸಕ ಡಾ. ರಂಗನಾಥ್ ನಿನ್ನೆ ಮಾತನಾಡುತ್ತಾ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 140 ಸ್ಥಾನಗಳನ್ನು ಪಡೆದಿರುವುದರ ಹಿಂದೆ ಶಿವಕುಮಾರ್ ಅವರು ಶಕ್ತಿ ಹಾಗೂ ಶ್ರಮವಿದೆ ಎಂದು ಅನೇಕ ನಾಯಕರು ಹೇಳುತ್ತಾರೆ. ಇದನ್ನು ಪಕ್ಷದ ಹೈಕಮಾಂಡ್ ಪರಿಗಣಿಸಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದ್ದರು. ಡಿ.ಕೆ. ಶಿವಕುಮಾರ್ ಅವರಂತೆ ಬೆಳಗ್ಗೆ 8 ರಿಂದ ರಾತ್ರಿ 3 ಗಂಟೆಯ ತನಕ ಕೆಲಸ ಮಾಡುವ ನಾಯಕರಿದ್ದರೆ ನನಗೆ ತಿಳಿಸಿ. ಇವರ ಶ್ರಮಕ್ಕೆ ತಕ್ಕ ಪ್ರತಿಫಲ ಇದ್ದೇ ಇರುತ್ತದೆ. ಡಿ. ಕೆ. ಶಿವಕುಮಾರ್ ಅವರು ಒಂದಲ್ಲ ಒಂದು ದಿನ, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬುದಾಗಿ ನಾವೆಲ್ಲರೂ ಅಪೇಕ್ಷೆ ಪಡುತ್ತೇವೆ ಎಂದಿದ್ದರು.

ಅದೇ ರೀತಿ ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ ಕೂಡ ಸಿಎಂ ಬದಲಾವಣೆ ಸಂಬಂಧ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬಾರದು. ಮಾತನಾಡಿದರೆ ನೋಟಿಸ್ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದರು. ಇದೀಗ ಇಬ್ಬರು ನಾಯಕರಿಗೂ ನೋಟಿಸ್ ನೀಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ