ತುಮಕೂರು : ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಐದು ವರ್ಷ ಇರುತ್ತಾರೆ. ಅಲ್ಲದೇ ಸಿದ್ದರಾಮಯ್ಯ ಅವರೇ ನೀಡಿರುವ ಹೇಳಿಕೆ ಪ್ರಕಾರ ನಮ್ಮಲ್ಲಿ ಹೈಕಮಾಂಡ್ ಇದೆ, ಹೈಕಮಾಂಡ್ ಹೇಳಿದಂತೆ ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕ್ರಾಂತಿ ಇರೋದಿಲ್ಲ, ಬದಲಾಗಿ ಶಾಂತಿಯಾಗಿ ಇರಲಿದೆ. ತುಮಕೂರು ಜಿಲ್ಲೆಯು ಕಲೆ, ಸಾಹಿತ್ಯ ಹಾಗೂ ನಾಟಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇದನ್ನು ನಾವು ಮುಂದೆ ಕೊಂಡೊಯ್ಯಬೇಕಾದಂತಹ ಜವಾಬ್ದಾರಿ ಇದೆ ಎಂದು ಹೇಳಿದ್ದಾರೆ.
ಗಾಂಧೀಜಿ ಸಿದ್ಧಾಂತ ಅವರ ನಂಬಿಕೆಯ ಮೇಲೆ ನಿಂತಿದೆ : ಮಹಾತ್ಮ ಗಾಂಧಿಯವರು ಸ್ವಾತಂತ್ರ್ಯವನ್ನು ತಂದು ಕೊಟ್ಟಂಥವರು. ಅವರು ಸತ್ಯ, ಅಹಿಂಸೆ, ಪ್ರಜಾಪ್ರಭುತ್ವ, ಜನಸೇವೆ ಮೇಲೆ ನಂಬಿಕೆ ಇಟ್ಟುಕೊಂಡಿದ್ದರು. ಗಾಂಧೀಜಿಯವರ ಸಿದ್ಧಾಂತವೇ ಅವರ ನಂಬಿಕೆಯ ಮೇಲೆ ನಿಂತಿದೆ ಎಂದು ತಿಳಿಸಿದರು.
ಗಾಂಧೀಜಿಯವರು ದೇಶದಲ್ಲಿ ಹಾಗೂ ಸಮಾಜದಲ್ಲಿ ಪ್ರಸ್ತುತವಾಗಿದ್ದಾರೆ. ಇದಲ್ಲದೇ, ಪ್ರಪಂಚದಲ್ಲಿಯೇ ಅವರು ಪ್ರಸ್ತುತವಾಗಿದ್ದಾರೆ ಎಂಬುದಕ್ಕೆ ಸಾಕಷ್ಟು ಸಾಕ್ಷಿ ನಮ್ಮ ಮುಂದೆ ಇದೆ ಎಂದು ಹೇಳಿದರು.
Laxmi News 24×7