ವಿಜಯನಗರ: ಇನ್ಶೂರೆನ್ಸ್ ಹಣಕ್ಕಾಗಿ ಕೊಲೆ ಮಾಡಿ, ಅದನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಪಟ್ಟ ಹಂತಕರನ್ನು ಸೆರೆ ಹಿಡಿಯುವಲ್ಲಿ ಹೊಸಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೊಸಪೇಟೆ ಹೊರವಲಯದಲ್ಲಿ ವ್ಯಕ್ತಿಯೊಬ್ಬನನ್ನು ಅಪಘಾತದಲ್ಲಿ ಮೃತಪಟ್ಟಂತೆ ತೋರಿಸಿ, 5.25 ಕೋಟಿ ರೂ. ಇನ್ಶೂರೆನ್ಸ್ ಹಣ ಲಪಟಾಯಿಸುವ ಯತ್ನವನ್ನು ಮಾಡಿದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಹೊಸಪೇಟೆಯ ಕೌಲ್ ಪೇಟೆಯ ನಿವಾಸಿ ಗಂಗಾಧರ ಹಾಗೂ ಬಂಧಿತರನ್ನು ಕೊಪ್ಪಳ ಜಿಲ್ಲೆಯ ಕೃಷ್ಣಪ್ಪ, ರವಿ ಗೋಸಂಗಿ, ವಿಜಯನಗರ ಜಿಲ್ಲೆಯ ಅಜೇಯ, ರಿಯಾಜ್, ಯೋಗರಾಜ್ ಸಿಂಗ್, ನಕಲಿ ಹೆಂಡತಿ ಹುಲಿಗೆಮ್ಮ ಎಂದು ಗುರುತಿಸಲಾಗಿದೆ.