ನಂದಗಡದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕದ ಉದ್ಘಾಟನೆ ನೆರವೇರಿಸಿದ ಶಾಸಕ ವಿಠ್ಠಲ ಹಲಗೇಕರ
-ಖಾನಾಪೂರ ತಾಲೂಕಿನ ನಂದಗಡದ ಗ್ರಾಮ ಪಂಚಾಯಿತಿಯ ನೂತನ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕದ ಉದ್ಘಾಟನೆಯನ್ನು ಶಾಸಕ ಮಹಾಲಕ್ಷ್ಮಿ ಗ್ರುಪ್ ಸಂಸ್ಥಾಪಕ ಅಧ್ಯಕ್ಷ ವಿಠ್ಠಲ ಹಲಗೇಕರ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಪೋಟೋ ಪೂಜೆ ಸಲ್ಲಿಸಿ ಗೌರವಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಗ್ರಾಮಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಲ್ಲಿ ಮತ್ತು ಪ್ಲಾಸ್ಟಿಕ್ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಇಂತಹಾ ಘಟನೆಗಳು ಅತ್ಯಂತ ಮಹತ್ವದ ಪಾತ್ರ ವಹಿಸುತ್ತವೆ
ಪ್ರತಿಯೊಬ್ಬರೂ ಕೂಡಾ ಈ ಘಟಕದ ಸದುಪಯೋಗವನ್ನು ಪಡೆದುಕೊಂಡು ಪರಿಸರ ಸಂರಕ್ಷಣೆಗೆ ಕೈಜೋಡಿಸಿ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ, ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Laxmi News 24×7