22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ…ಮಾಜಿ ಸೈನಿಕನನ್ನು ಅದ್ಧೂರಿಯಾಗಿ ಸ್ವಾಗತಿಸಿದ ಗ್ರಾಮಸ್ಥರು
22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ…
ಮಾಜಿ ಸೈನಿಕನನ್ನು ಅದ್ಧೂರಿಯಾಗಿ ಸ್ವಾಗತಿಸಿದ ಗ್ರಾಮಸ್ಥರು
ಹಾಲಗಿಮರ್ಡಿಯ ಯೋಧ ಮಂಜುನಾಥ ಪಟಾತ್
ಜೈ ಘೋಷಣೆಗಳನ್ನು ಕೂಗಿ ಸಂಭ್ರಮ
ಮಂಜುನಾಥ ರಾಮಪ್ಪ ಪಟಾತ್ ಅವರು 22 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ತಮ್ಮ ಸ್ವಗ್ರಾಮಕ್ಕೆ ಮರಳಿದ್ದು, ಬೆಳಗಾವಿಯಲ್ಲಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಬೆಳಗಾವಿ ಜಿಲ್ಲೆಯ ಹಾಲಗಿಮರ್ಡಿಯ ಮಂಜುನಾಥ ರಾಮಪ್ಪ ಪಟಾತ್ ಅವರು 22 ವರ್ಷವಾಗಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದಾರೆ. ಇಂದು ಸ್ವಗ್ರಾಮಕ್ಕೆ ಆಗಮಿಸಿದ ಮಂಜುನಾಥ್ ಪಟಾತ್ ಅವರನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಲಾಯಿತು.
22 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಮ್ಮ ಬಾಲ್ಯದ ಗೆಳೆಯ ಸ್ವಗ್ರಾಮಕ್ಕೆ ಮರಳುತ್ತಿದ್ದಾರೆ. ಮಂಜುನಾಥ ಹಾಲಗಿಮರ್ಡಿಯ ಹೆಮ್ಮೆಯ ಪುತ್ರ ಎಂದು ಹವಾಲ್ದಾರ ಅಡವಯ್ಯಾ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕನ ಕುಟುಂಬಸ್ಥರು, ಗೆಳೆಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.