ಮೈಸೂರು: ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ – ನಿರ್ದೇಶಕ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ ಚಾಪ್ಟರ್ 1’ ಗುರುವಾರದಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಹುಭಾಷೆಗಳಲ್ಲಿ ಬಿಡುಗಡೆ ಆಗಿದೆ. ಎಲ್ಲೆಡೆ ಸಿನಿಮಾ ಸದ್ದು ಜೋರಾಗಿದ್ದು, ಮಾಜಿ ಸಂಸದ ಯಶಸ್ವಿ ಸಿನಿಮಾ ವೀಕ್ಷಿಸಲು ಪ್ರೇಕ್ಷಕರನ್ನು ಆಹ್ವಾನಿಸಿದ್ದಾರೆ.
ಕಾಂತಾರ ಚಾಪ್ಟರ್ 1 ವೀಕ್ಷಿಸಲು ಟಿಕೆಟ್ ಬುಕ್ ಮಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಪಕ್ಷದ ಕಾರ್ಯಕರ್ತರನ್ನು ಡಿಆರ್ಸಿಗೆ ಆಹ್ವಾನಿಸಿದ್ದಾರೆ. ಇಂದು ಸಂಜೆಯ 4 ಗಂಟೆಯ ಶೋಗೆ ಹಾಜರಾಗಲು ತಿಳಿಸಿದ್ದಾರೆ. ಎಲ್ಲರಿಗೂ ಟಿಕೆಟ್ ಬುಕ್ ಮಾಡಿದ್ದೇನೆ, ಬನ್ನಿ ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.
ಟಿಕೆಟ್ಸ್ ಖರೀದಿಯ ಮಾಹಿತಿ ಹಂಚಿಕೊಂಡ ಪ್ರತಾಪ್ ಸಿಂಹ, ”4 ಗಂಟೆಗೆ ಕಾರ್ಯಕರ್ತರೆಲ್ಲ ಒಡಗೂಡಿ ಕಾಂತಾರ ಚಾಪ್ಟರ್ 1 ನೋಡೋಣ, DRCಯಲ್ಲಿ ಫುಲ್ಸ್ಕ್ರೀನ್ ಬುಕ್ ಮಾಡಿದ್ದೇನೆ” ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಮೈಸೂರಿನ ಡಿಆರ್ಸಿ ಸಿನಿಮಾಸ್ನಲ್ಲಿ 68,920 ರೂಪಾಯಿ ನೀಡಿ ಟಿಕೆಟ್ ಖರೀದಿಸಿದ್ದಾರೆ.
Laxmi News 24×7