Breaking News

ಹಂಪಿ ವಿವಿ ಉಳಿಸಲು ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ

Spread the love

ಬೆಂಗಳೂರು,ಡಿ.27- ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಉಳಿಸಿ ಹೋರಾಟ ಉಗ್ರರೂಪ ತಾಳುವ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡು ಅನುದಾನ ಬಿಡುಗಡೆ ಮಾಡುವಂತೆ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕೊಟ್ಟಿಗೆ ಪಾಳ್ಯದಲ್ಲಿ ನಡೆದ ಕರವೇ ಸಭೆಯಲ್ಲಿ ಮಾತನಾಡಿದ ಅವರು, ಹಂಪಿ ಕನ್ನಡ ವಿವಿಗೆ ಅನುದಾನ ನೀಡುವುದು ಸೇರಿದಂತೆ ವಿಶ್ವವಿದ್ಯಾಲಯ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿದರು.

ಟ್ವಿಟರ್‍ನಲ್ಲಿ ಹಂಪಿ ಕನ್ನಡ ವಿವಿ ಉಳಿಸಿ ಎಂಬ ಅಭಿಯಾನಕ್ಕೆ ಈಗಾಗಲೇ 4,500 ಲಕ್ಷ ಮಂದಿ ಕೈ ಜೋಡಿಸಿದ್ದಾರೆ. ಇದರಲ್ಲಿ ಹಲವಾರು ಸಾಹಿತಿಗಳು, ಕಲಾವಿದರು, ಬುದ್ದಿಜೀವಿಗಳು, ಕನ್ನಡಪರ ಹೋರಾಟಗಾರರು ಒಳಗೊಂಡಿದ್ದಾರೆ.

ಕನ್ನಡಕ್ಕೆಂದು ಇರುವ ಏಕೈಕ ವಿವಿ ಇದು. ಇದಕ್ಕೆ ಸೂಕ್ತ ಅನುದಾನ ಬಿಡುಗಡೆ ಮಾಡುವ ಮೂಲಕ ಅಭಿವೃದ್ಧಿಪಡಿಸುವುದು ಸರ್ಕಾರದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಹೋರಾಟ ತೀವ್ರಗೊಳ್ಳಲಿದೆ ಎಂದು ಹೇಳಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ