Breaking News

ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

Spread the love

ಬೆಂಗಳೂರು, ಅಕ್ಟೋಬರ್​ 04: ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವೆಂದು ಶಂಕಿಸಲಾಗಿರುವ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್​​ (Coldrif syrup) ಅನ್ನು ಕರ್ನಾಟಕ ರಾಜ್ಯದಲ್ಲೂ ನಿಷೇಧ (Ban) ಮಾಡಲಾಗಿದೆ. ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು

ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ ಪತ್ರ ಬರೆಯುವ ಮೂಲಕ ರಾಜ್ಯದ ಎಲ್ಲಾ ಔಷಧಿ ಮಾರಾಟಗಾರರು ಹಾಗೂ ವಿತರಕರಿಗೆ ಮಾರಾಟ ಮಾಡದಂತೆ ಸೂಚನೆ ನೀಡಿದೆ.ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ ಎಲ್ಲಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್​ಗಳಿಗೆ ಪತ್ರ ಬರೆಯಲಾಗಿದ್ದು, ಕೋಲ್ಡ್ರಿಫ್​​​ ಕಾಫ್ ಸಿರಪ್ ಮಾರಾಟ ಮಾಡದಂತೆ ಮೆಡಿಕಲ್​ ಸ್ಟೋರ್ಸ್​ ಹಾಗೂ ಡಿಸ್ಟ್ರಿಬ್ಯೂಟರ್​​ಗಳಿಗೆ ಸೂಚನೆ ನೀಡಿದೆ.

ಜೊತೆಗೆ ಡೈಎಥಿಲೀನ್ ಗ್ಲೈಕಾಲ್ ಕಂಟೇಟ್ ಕಾಫ್ ಸಿರಪ್ ತಡೆಗೂ ಸೂಚಿಸಲಾಗಿದೆ.ಕೋಲ್ಡ್ರಿಫ್ ಕಾಫ್ ಸಿರಪ್​​ ಅನ್ನು ಕರ್ನಾಟಕದಲ್ಲಿ ಮಾತ್ರವಲ್ಲ ತಮಿಳನಾಡಿನಲ್ಲೂ ಬ್ಯಾನ್ ಮಾಡಲಾಗಿದೆ. ಎಲ್ಲಾ ಸ್ಟಾಕ್‌ಗಳನ್ನು ಕೂಡ ತಕ್ಷಣವೇ ಸ್ಥಗಿತಗೊಳಿಸಲಾಗಿದೆ.

ಹೀಗಾಗಿ ಮುಂದಿನ ಸರ್ಕಾರದ ಆದೇಶದವರೆಗೆ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕಾಫ್ ಸಿರಫ್ ಮಾರಟ ಮಾಡದ್ದಂತೆ ತಿಳಿಸಲಾಗಿದ್ದು, ಕರ್ನಾಟಕದಲ್ಲಿ ಈಗಾಗಲೇ ಮಾರಾಟಗೊಂಡಿರುವ ಮತ್ತು ನಿಮ್ಮ ಬಳಿ ಇರುವ ಕೋಲ್ಡ್ರಿಫ್ ಸಿರಪ್‌ನ ಪ್ರಸ್ತುತ ಸ್ಟಾಕ್ ವಿವರಗಳನ್ನು ಡ್ರಗ್ಸ್ ಕಂಟ್ರೋಲ್ ಇಲಾಖೆ ಕಳುಹಿಸುವಂತೆ ಸೂಚನೆ ನೀಡಲಾಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿಯ KMCRI ಸಾಧನೆ: ಶಸ್ತ್ರಚಿಕಿತ್ಸೆ ಮಾಡಿ ನವಜಾತ ಶಿಶುವಿನ ಹೊಟ್ಟೆಯಲ್ಲಿದ್ದ ಭ್ರೂಣ ಯಶಸ್ವಿಯಾಗಿ ಹೊರತೆಗೆದ ವೈದ್ಯರು!

Spread the loveಹುಬ್ಬಳ್ಳಿ: 14 ದಿನಗಳ ನವಜಾತ ಶಿಶುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್​ಐ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ