Breaking News

ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ: ಡಿಸಿಎಂ

Spread the love

ಬೆಂಗಳೂರು: ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಹಾಗೂ ಕಸವನ್ನು ಎಸೆಯುವರನ್ನು ಗುರುತಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಹಾಗೂ ರಸ್ತೆ ದುರಸ್ತಿಗಳನ್ನು ಅತ್ಯಂತ ವೇಗವಾಗಿ ಅಧಿಕಾರಿಗಳು ಮಾಡುತ್ತಿದ್ದಾರೆ. ದಸರಾ ರಜೆ ಇದ್ದ ಕಾರಣಕ್ಕೆ ಎಲ್ಲೆಂದರಲ್ಲಿ ಕಸದ ಸಮಸ್ಯೆ ಹೆಚ್ಚಿದೆ. ಇದಕ್ಕೂ ಸಹ ಒಂದು ಅಭಿಯಾನ ನಡೆಸಲಾಗುವುದು. ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಹಾಗೂ ಕಸವನ್ನು ಎಸೆಯುವರನ್ನು ಗುರುತಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಬೆಂಗಳೂರನ್ನು ಸ್ವಚ್ಛವಾಗಿ ಇಡಲು ಎಲ್ಲೆಂದರಲ್ಲಿ ಸುರಿದಿರುವ ಕಟ್ಟಡ ತ್ಯಾಜ್ಯಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಹಾಕಲು ಡಬ್ಬಿಗಳನ್ನು ಇಡುವ ಕುರಿತು ಪ್ರತಿಕ್ರಿಯಿಸಿ, ಈ ಬಗ್ಗೆ ಪಾಲಿಕೆಗಳ ಆಯುಕ್ತರಿಗೆ ವರದಿ ನೀಡಿ ಎಂದು ಹೇಳಿದ್ದೇನೆ. ಜಿಬಿಎ ಹಾಗೂ ಐದು ಪಾಲಿಕೆಗಳ ಆಯುಕ್ತರು ಸೇರಿ ಇತರೆ ನಗರಗಳಲ್ಲಿ ಯಾವ ರೀತಿ ವ್ಯವಸ್ಥೆ ಇದೆ ಎಂಬುದನ್ನು ತಿಳಿದುಕೊಂಡು ವರದಿ ನೀಡಿ ಎಂದು ತಿಳಿಸಿದ್ದೇನೆ. ಜನರು ರಸ್ತೆ ಬದಿ ಹಾಗೂ ಎಲ್ಲೆಂದರಲ್ಲಿ ಕಸವನ್ನು ಎಸೆಯುತ್ತಿದ್ದಾರೆ. ಇದನ್ನು ತಪ್ಪಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಸಾರ್ವಜನಿಕರು ಸಹ ಇದಕ್ಕೆ ಸಹಕಾರ ನೀಡಬೇಕು. ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದರೆ ಅದರ ಫೋಟೋ ತೆಗೆದು ಪಾಲಿಕೆಗಳು ಸೂಚಿಸಿರುವ ದೂರವಾಣಿ ಸಂಖ್ಯೆಗೆ ಕಳುಹಿಸಬೇಕು ಎಂದು ತಿಳಿಸಿದರು.

1 ಕೋಟಿ ರೂ. ದಂಡ ಸಂಗ್ರಹ: ಏಕ ಬಳಕೆಯ ಪ್ಲಾಸ್ಟಿಕ್ ಸೇರಿದಂತೆ ಎಲ್ಲೆಂದರಲ್ಲಿ ಕಸ ಎಸೆಯುವವರಿಂದ 1 ಕೋಟಿ ರೂಪಾಯಿ ದಂಡ ಸಂಗ್ರಹ ಮಾಡಲಾಗಿದೆ. ಜೊತೆಗೆ ಕಸ ಸಂಗ್ರಹ ವಾಹನಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ. ಈ ಮೊದಲು 198 ವಾರ್ಡ್​ಗಳು ಮಾತ್ರ ಇದ್ದವು ಈಗ 300ಕ್ಕೂ ಹೆಚ್ಚು ವಾರ್ಡ್​ಗಳು ಆಗುತ್ತಿರುವುದರಿಂದ ಕಸ ಸಂಗ್ರಹ ಸಾಮರ್ಥ್ಯವನ್ನು ಸಹ ಹೆಚ್ಚಿಸಲಾಗುವುದು ಎಂದರು.

ಕೇಬಲ್ ಹಾವಳಿಗೆ ಕ್ರಮ: ನಗರದಾದ್ಯಂತ ಎಲ್ಲೆಂದರಲ್ಲಿ ಕೇಬಲ್​ಗಳನ್ನು ಎಳೆಯಲಾಗಿದೆ. ಬೆಸ್ಕಾಂಗೆ ಸೇರಿದ ಕಂಬಗಳಲ್ಲಿ ಟಿವಿ ಕೇಬಲ್​ಗಳು ನೇತಾಡುತ್ತಿದ್ದು, ನಗರ ಸೌಂದರ್ಯಕ್ಕೆ ಕಪ್ಪುಚುಕ್ಕೆಯಾಗಿದೆ. ಸಮಸ್ಯೆ ಬಗೆಹರಿಸಲು ಸಚಿವರಾದ ಕೆ.ಜೆ. ಜಾರ್ಜ್ ಅವರೊಟ್ಟಿಗೆ ಮತ್ತೊಂದು ಸುತ್ತಿ‌ನ ಸಭೆ ನಡೆಸಲಾಗುವುದು. ಡೆಕ್ ಒಳಗಡೆ ಕೇಬಲ್‌‌ ಗಳನ್ನು ಸಾಗಿಸಲು ಯಾರೂ ಸಹ ಸಹಕಾರ ‌ನೀಡುತ್ತಿಲ್ಲ. ಎಂಟನೇ ತಾರಿಕಿನ ನಂತರ 4 ಲಕ್ಷ ವಿದ್ಯುತ್ ಸಂಪರ್ಕ ನೀಡುವುದರ ಬಗ್ಗೆ ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ. ಇದರ ಜೊತೆಗೆ ಮುಂದಿನ ವಾರ ಎ ಹಾಗೂ ಬಿ ಖಾತಾ ವಿಚಾರವಾಗಿ ಮಾಹಿತಿ ನೀಡಲಾಗುವುದು ಎಂದು ಡಿಸಿಎಂ ಹೇಳಿದರು.

ಎ ಮತ್ತು ಬಿ ಖಾತಾ ವಿಚಾರದಲ್ಲಿ ಕ್ರಾಂತಿಕಾರಿ ಕೆಲಸಗಳು ನಡೆದಿವೆ. ಈ ಮೊದಲು ಹೇಗಿತ್ತು, ಏನಾಗಿದೆ ಎಂದು ಇದರ ಬಗ್ಗೆ ಮುಂದಿನ ದಿನಗಳಲ್ಲಿ ಪಿಪಿಟಿ ತಯಾರಿಸಿ ಪ್ರತಿಯೊಂದೂ ಮಾಹಿತಿ ನೀಡಲಾಗುವುದು. ಟೀಕೆ ಮಾಡುವವರಿಗೂ ಇದರಿಂದ ಉತ್ತರ ದೊರೆಯಲಿದೆ ಎಂದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ