Breaking News

ದಸರಾ ಮುಗಿಸಿ ಶಿಬಿರಗಳತ್ತ ಹೊರಟ ಗಜಪಡೆ

Spread the love

ಮೈಸೂರು: ಯಶಸ್ವಿಯಾಗಿ ದಸರಾ, ಜಂಬೂಸವಾರಿ ಮುಗಿಸಿದ ಅಭಿಮನ್ಯು ನೇತೃತ್ವದ ಗಜಪಡೆಗೆ ಅರಮನೆಯ ಅವರಣದಲ್ಲಿ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಶಿಬಿರಗಳಿಗೆ ಬೀಳ್ಕೊಡಲಾಯಿತು.

14 ಆನೆಗಳು ಅವುಗಳ ಮಾವುತರು, ಕಾವಾಡಿಗರನ್ನು ಕೋಡಿ ಸೋಮೇಶ್ವರ ದೇವಾಲಯದ ಬಳಿ ಅರಣ್ಯ ಇಲಾಖೆ ಬೀಳ್ಕೊಟ್ಟಿತು. ಆನೆಗಳನ್ನು ನೋಡಲು ಸೇರಿದ್ದ ಜನರು ಫೋಟೋ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಆನೆಗಳು ನಿರ್ಗಮಿಸುತ್ತಿರುವುದನ್ನು ನೋಡುತ್ತಾ ಭಾವುಕರಾದರು.

ಕಳೆದ 60 ದಿನಗಳಿಂದಲೂ ಗಜಪಯಣದ ಮೂಲಕ ಎರಡು ಹಂತಗಳಲ್ಲಿ ಆಗಮಿಸುವ ಆನೆಗಳು ಕೋಡಿ ಸೋಮೇಶ್ವರ ದೇವಾಲಯದ ಆವರಣದಲ್ಲಿ ವಾಸ್ತವ್ಯ ಹೂಡುತ್ತವೆ. ಪ್ರತಿನಿತ್ಯ ಅರಮನೆಯಿಂದ ಬನ್ನಿ ಮಂಟಪದವರೆಗೂ ತಾಲೀಮಿನಲ್ಲಿ ಭಾಗವಹಿಸುತ್ತವೆ. ಈ ಅಭ್ಯಾಸದ ಜೊತೆಗೆ ಮರದ ಅಂಬಾರಿ ಹೊರುವ ತಾಲೀಮು, ಸಿಡಿಮದ್ದು ಸಿಡಿಸುವ ತಾಲೀಮು ಹಾಗು ಆನೆಗಳ ತೂಕ ಪರಿಶೀಲನೆಗಳೆಲ್ಲ ನಡೆಯುತ್ತವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ