Breaking News

ಎರಡು ಸಚಿವ ಸ್ಥಾನ ವಾಲ್ಮೀಕಿ ಸಮುದಾಯಕ್ಕೆ ನೀಡುವಂತೆ ಒತ್ತಡ ಹಾಕುತ್ತೇವೆ: ಸಚಿವ ಸತೀಶ್​ ಜಾರಕಿಹೊಳಿ

Spread the love

ಬೆಳಗಾವಿ : ನಾಳೆ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಖಾಲಿ ಇರುವ ಎರಡು ಸಚಿವ ಸ್ಥಾನಗಳನ್ನು ವಾಲ್ಮೀಕಿ ಸಮುದಾಯಕ್ಕೆ ನೀಡುವಂತೆ ಸ್ವಾಮೀಜಿ ನೇತೃತ್ವದಲ್ಲಿ ಬೇಡಿಕೆ ಇಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಈ ಕುರಿತು ನಗರದಲ್ಲಿಂದು ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ‘ನಾಗೇಂದ್ರ ಮತ್ತು ಕೆ. ಎನ್. ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿರುವ ಎರಡು ಸಚಿವ ಸ್ಥಾನಗಳನ್ನು ಭರ್ತಿ ಮಾಡುವಂತೆ ಈ ಹಿಂದೆಯೇ ಬೇಡಿಕೆ ಇಟ್ಟಿದ್ದೇವೆ. ಆದಷ್ಟು ಬೇಗನೆ ಈ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ತಿಳಿಸಿದ್ದೇವೆ. ನಾಳೆ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದ ನಿಯೋಗದ ಮೂಲಕ ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷರಿಗೆ ಭೇಟಿಯಾಗಿ ಒತ್ತಡ ಹಾಕುತ್ತೇವೆ’ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಕಾರ್ಯವೈಖರಿ ಕುರಿತು ಮಾಜಿ ಸಚಿವ ರಾಜಣ್ಣ ಹೇಳಿಕೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದನ್ನು ನೀವು ಅವರನ್ನೇ ಕೇಳಬೇಕು. ನಾನು ಹೇಳುವುದಕ್ಕೆ ಆಗುವುದಿಲ್ಲ. ಅವರವರ ವರ್ಕಿಂಗ್ ಸ್ಟೈಲ್ ಹೇಗಿರಬೇಕು ಅಂತಾ ನಾವು ಹೇಳೋಕೆ ಆಗಲ್ಲ. ಅದು ಅವರ ವರ್ಕಿಂಗ್ ಸ್ಟೈಲ್ ಅಂತಾ ತಿಳಿಸಿದರು.

ಬರುವ ಎರಡೂವರೆ ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಆಗಿ ನಾನೇ ಮುಂದುವರೆಯುತ್ತೇನೆ ಅಂತಾ ಹೇಳಿದ್ದಾರೆ. ಹೀಗಾಗಿ ಗೊಂದಲಕ್ಕೆ ತೆರೆ ಬಿದ್ದಿದೆ ಎಂದು ನಾವು ಭಾವಿಸಿದ್ದೇವೆ. ಅಂತಿಮವಾಗಿ ಹೈಕಮಾಂಡ್ ಹೇಳಬೇಕಾಗುತ್ತದೆ ಎಂದರು.

ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಇನ್ನೂ ಅವರ ಆಪ್ತರು ಹೇಳುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಸತೀಶ್​ ಜಾರಕಿಹೊಳಿ, ಮುಖ್ಯಮಂತ್ರಿ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ ಇಲ್ಲ ಅಂತಾ ಹೇಳೋಕೆ ಆಗಲ್ಲ, ಗೊಂದಲ ಇದೆ. ಆ ಗೊಂದಲವನ್ನು ಸರಿಪಡಿಸುವ ಕೆಲಸವನ್ನು ಹೈಕಮಾಂಡ್ ಮಾಡಬೇಕು ಎಂದು ಹೇಳಿದರು.

ಗಣತಿಯಲ್ಲಿ ಹೆಚ್ಚು ಪ್ರಶ್ನಾವಳಿ ಇವೆ ಅಂತಾ ಡಿಸಿಎಂ ಡಿ. ಕೆ. ಶಿವಕುಮಾರ್ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯಿಸಿ, ‘ಗೋಕಾಕ್​ನಲ್ಲಿ ನಿನ್ನೆ ನನ್ನ ಗಮನಕ್ಕೂ ಇದು ಬಂದಿದೆ. 60 ಪ್ರಶ್ನೆಗಳಿವೆ. ಅವುಗಳಿಗೆ ಉತ್ತರಿಸಲು ಹಿಂದೇಟು ಹಾಕುತ್ತಿದ್ದಾರೆ. ನಾವು ಯಾಕೆ ನಮ್ಮ ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸಬೇಕು ಅಂತಾ ಕೆಲವರು ಪ್ರಶ್ನಿಸಿದ್ದಾರೆ. ಹಾಗಾಗಿ, ಪ್ರಶ್ನೆಗಳನ್ನು ಕಡಿಮೆ ಮಾಡಿದರೆ ಒಳ್ಳೆಯದು’ ಎಂದು ಅಭಿಪ್ರಾಯಪಟ್ಟರು.

ರಾಹುಲ್ ಜಾರಕಿಹೊಳಿ ಡಿಸಿಸಿ ಬ್ಯಾಂಕ್ ಚುನಾವಣೆಯ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಇನ್ನೂ ಚರ್ಚೆಯಲ್ಲಿದೆ. ಎಲ್ಲ ನಾಯಕರು ಕೂಡಿ ಚರ್ಚೆ ಮಾಡಿ, ನಿಲ್ಲಿಸಬೇಕೋ, ಬೇಡವೋ ಎಂಬುದನ್ನು ಬರುವ ನಾಲ್ಕೈದು ದಿನಗಳಲ್ಲಿ ನಿರ್ಧಾರ ಪ್ರಕಟಿಸುತ್ತೇವೆ. ಕನಿಷ್ಠ 10 ತಾಲೂಕುಗಳಲ್ಲಿ ಅವಿರೋಧ ಆಯ್ಕೆಗೆ ನಾವು ಪ್ರಯತ್ನಿಸುತ್ತಿದ್ದೇವೆ. ಇನ್ನುಳಿದಂತೆ ಐದು ತಾಲೂಕುಗಳಲ್ಲಿ ಸ್ಥಳೀಯ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ಚುನಾವಣೆ ಆಗಲಿದೆ. ಆದರೂ ಇನ್ನಷ್ಟು ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆಗೆ ಕೊನೆವರೆಗೂ ಪ್ರಯತ್ನ ಮಾಡುತ್ತೇವೆ’ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ