Breaking News

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು

Spread the love

ಬೆಂಗಳೂರು, (ಅಕ್ಟೋಬರ್ 07): ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ (Former PM HD Devegowda) ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ (Bengaluru) ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದ್ದು, ನಿನ್ನೆ (ಅಕ್ಟೋಬರ್ 06) ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಾ ಸುದರ್ಶನ್ ಬಲ್ಲಾಳ್ ಅವರು ದೇವೇಗೌಡ್ರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಅಷ್ಟೇ ಅಂದ್ರೆ 2024ರ ಫೆಬ್ರವರಿ 15ರಂದು ತೀವ್ರ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಇದೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಆರೋಗ್ಯವಾಗಿ ಡಿಸ್ಚಾರ್ಜ್ ಆಗಿದ್ದರು.ಹೆಚ್‌ಡಿ ದೇವೇಗೌಡ ಅವರಿಗೆ 92 ವಯಸ್ಸಾಗಿದ್ದು, ವಯೋಸಹಜ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಆಗಾಗ ಆರೋಗ್ಯ ಕೈಕೊಡುತ್ತಲೇ ಇದೆ.  ಆದರೂ ಸಹ ದೊಡ್ಡಗೌಡರು ಸದ್ಯ ಸಕ್ರಿಯ ರಾಜಕಾರಣದಲ್ಲಿದ್ದು, ರಾಜ್ಯಸಭೆ ಸದಸ್ಯರಾಗಿದ್ದಾರೆ. ಈ ಇಳಿವಯಸ್ಸಿನಲ್ಲೂ ಹಾಸನ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದರು. ಟ್ರಕ್ ಗಣೇಶ ಮೆರವಣಿಗೆ ಮೇಲೆ ಹರಿದು ದುರಂತ ಸಂಭವಿಸಿದ ಬಳಿಕ ಸಂತ್ರಸ್ಥರ ಕುಟುಂಬ ವರ್ಗವನ್ನು ದೇವೇಗೌಡ ಭೇಟಿಯಾಗಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ