Breaking News

ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ, ಉತ್ತರ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆ

Spread the love

ಬೆಂಗಳೂರು, ಅಕ್ಟೋಬರ್​ 07: ಕರ್ನಾಟಕದ ವಿವಿಧೆಡೆ ನಾಳೆ ಗಾಳಿ ಸಹಿತ ಉತ್ತಮ ಮಳೆ (Rain) ಆಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ರೆಡ್​ ಅಲರ್ಟ್​ ಹಿನ್ನಲೆ ಗಡಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಭಾಶಶಃ ಮೋಡ ಕವಿದ ವಾತಾವರಣ ಅಥವಾ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ. ಗಾಳಿ ವೇಗ ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇರುವ ಕಾರಣ ಕೆಲವು ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯನ್ನೂ ನಿರೀಕ್ಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಸಾಧಾರಣ ಮಳೆ ಆಗಲಿದ್ದು, ಹೆಚ್ಚು ಗಾಳಿ ಇರಲಿದೆ. ಬೀದರ್​, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಆಗಲಿದೆ. ಶಿವಮೊಗ್ಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ 30 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಶೇ. 25ರಷ್ಟು ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲೂ ಮಳೆ

ರಾಜಧಾನಿ ಬೆಂಗಳೂರಲ್ಲಿಯೂ ನಾಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಬೆಳಗ್ಗೆಯಿಂದ ಮಧ್ಯಾಹ್ನದ ಅವಧಿಯಲ್ಲಿ ಸಾಮಾನ್ಯ ಮಳೆ ಆಗಲಿದ್ದು, ಸಂಜೆ ವೇಳೆ ಗಾಳಿ ಸಹಿತ ಮಳೆ ಸುರಿಯಲಿದೆ. ನಗರದ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇರಲಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ