Breaking News

ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆ

Spread the love

ಕೊಪ್ಪಳ, ಅಕ್ಟೋಬರ್ 8: ದೇವಿಕ್ಯಾಂಪ್​ನಿಂದ ಗಂಗಾವತಿಗೆ ಬೈಕ್​ ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನ ಭೀಕರ ಹತ್ಯೆಯಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿನಗರದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಘಟನೆ ನಡೆದ ಸ್ಥಳಕ್ಕೆ ಧಾವಿಸಿರುವ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿಯ ಹೆಚ್​​​ಆರ್​ಎಸ್​ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಳಸಿರುವ ಟಾಟಾ ಇಂಡಿಕಾ ಕಾರು ಪತ್ತೆಯಾಗಿದೆ.

ನಡೆದಿದ್ದೇನು?

ಕೊಪ್ಪಳ ಜಿಲ್ಲೆಯ ಗಂಗಾವತಿ ಯುವ ಮೋರ್ಚಾದ ಅಧ್ಯಕ್ಷ ವೆಂಕಟೇಶ್(31) ಕೊಲೆಯಾದ ದುರ್ದೈವಿ. ವೆಂಕಟೇಶ್ ಸ್ನೇಹಿತರೊಟ್ಟಿಗೆ ಊಟ ಮಾಡಿ ದೇವಿಕ್ಯಾಂಪ್ನಿಂದ ಗಂಗಾವತಿಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ಸಮಯದಲ್ಲಿ ದುಷ್ಕರ್ಮಿಗಳು ಅವರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾರೆ. ಹೀಗೆ ಬಂದವರು ಅವರ ಬೈಕ್​ಗೆ ಗುದ್ದಿದ್ದಾರೆ. ವೆಂಕಟೇಶ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ವೆಂಕಟೇಶ್​​​​​​ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ದುರಂತ ಘಟನೆ ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಆಸ್ಪತ್ರೆಯ ಮುಂದೆಯೇ ನಡೆದಿದೆ. ಗಂಗಾವತಿನಗರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು,  ಘಟನೆ ನಡೆದ ಸ್ಥಳಕ್ಕೆ ಬಂದ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದು, ಗಂಗಾವತಿಯ ಹೆಚ್​​​ಆರ್​ಎಸ್​ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಳಸಿರುವ ಟಾಟಾ ಇಂಡಿಕಾ ಕಾರು ಪತ್ತೆಯಾಗಿದೆ.

ಹಳೇ ದ್ವೇಷಕ್ಕೆ ನಡೀತಾ ಕೊಲೆ?

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಹಿಂದೆ ಹಳೇ ದ್ವೇಷವಿರುವ ಶಂಕೆ ವ್ಯಕ್ತವಾಗಿದೆ. ವೆಂಕಟೇಶ್ ಕುರುಬರ ಸ್ನೇಹಿತರು ರವಿ ಎಂಬಾತನ ಮೇಲೆ ಕೊಲೆ ಆರೋಪ ಹೊರಿಸಿದ್ದಾರೆ. ವೆಂಕಟೇಶ್ ಹಾಗೂ ರವಿ ಮದ್ಯೆ ಕಳೆದ ಏಳೆಂಟು ವರ್ಷಗಳಿಂದ ದ್ವೇಷವಿದ್ದು, ನಾಯಕತ್ವದ ವಿಚಾರದಲ್ಲಿ ಇಬ್ಬರ ನಡುವೆ ವೈಷಮ್ಯ ಮೂಡಿತ್ತು. ಏರಿಯಾ ಕಂಟ್ರೋಲ್‌ ವಿಚಾರಕ್ಕೂ ವೆಂಕಟೇಶ್ ನಡುವೆ ಭಿನ್ನಾಭಿಪ್ರಾಯವಿತ್ತು. ಇದೇ ಕಾರಣದಿಂದ ರವಿ ಈ ದುಷ್ಕೃತ್ಯವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ