ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಇದರಲ್ಲಿ ಯಾವುದೇ ಬದಲಾವಣೆಗಳು ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ನಿಗದಿಯಂತೆ ಶಾಲೆಗಳು ಆರಂಭವಾಗಲಿದೆ. ಆದರೆ ಕೊರೊನ ಹಿನ್ನೆಲೆಯಲ್ಲಿ ಯಾವರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂಬುದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದರು.
ಜನವರಿ 1ರಿಂದ ಶಾಲೆಗಳು ಆರಂಭವಾಗಲಿದ್ದು, 6-9ನೇ ತರಗಿವರೆಗೆ ವಿದ್ಯಾಗಮ ಹಾಗೂ ಎಸ್.ಎಸ್.ಎಲ್.ಸಿ, ಪಿಯುಸಿ ತರಗತಿಗಳು ಆರಂಭವಾಗಲಿವೆ ಎಂದರು.
Laxmi News 24×7