Breaking News

ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಸ್ಪತ್ರೆಗೆ ದಾಖಲು

Spread the love

ಚಿತ್ರದುರ್ಗ, (ಅಕ್ಟೋಬರ್ 08): ದಾವಣಗೆರೆ (Davanagere) ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ (Rajanahalli valmiki Mutt Prasannananda swamiji) ಅನಾರೋಗ್ಯಕ್ಕೀಡಾಗಿದ್ದು, ಚಿತ್ರದುರ್ಗದಲ್ಲಿ (Chitradruga) ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಗರ್ ಏರುಪೇರಾಗಿ ಅಸ್ವಸ್ಥರಾಗಿದ್ದ ವಾಲ್ಮೀಕಿ ಮಠದ ಪ್ರಸನ್ನಾನಂದಪುರಿಶ್ರೀ, ನಿನ್ನೆ(ಅಕ್ಟೋಬರ್ 08) ವಾಲ್ಮೀಕಿ ಜಯಂತ್ರಿ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಸದ್ಯ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಆದ್ರೆ, ಶ್ರೀಗಳನ್ನ ನೋಡಲು ಭಕ್ತರ ದಂಡು ಆಸ್ಪತ್ರೆಗೆ ದೌಡಾಯಿಸುತ್ತಿದೆ. ಇದರಿಂದ ಶ್ರೀಗಳನ್ನು ಬೇರೆಡೆ ಶಿಫ್ಟ್ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ.

ಶ್ರೀಗಳ ಆರೋಗ್ಯದ ಬಗ್ಗೆ ಡಾಕ್ಟರ್ ಮಾಹಿತಿ

ಇನ್ನು ಪ್ರಸನ್ನಾನಂದಪುರಿಶ್ರೀ ಆರೋಗ್ಯದ ಬಗ್ಗೆ ಬಸವೇಶ್ವರ ಆಸ್ಪತ್ರೆಯ ವೈದ್ಯ ಡಾ.ವಿಶ್ವಾಸ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ವಾಲ್ಮೀಕಿಶ್ರೀಗಳಿಗೆ ಶುಗರ್ ಅನ್ ಕಂಟ್ರೋಲ್ಡ್ ಆಗಿತ್ತು. ಆಸ್ಪತ್ರೆಗೆ ಬಂದಾಗ ಶುಗರ್ ಲೆವಲ್ 440 ಆಗಿತ್ತು. ಜೊತೆಗೆ ಜ್ವರ ಬಂದಿದ್ದವು. ಸದ್ಯ ಚಿಕಿತ್ಸೆ ಬಳಿಕ ಈಗ ಶುಗರ್ ಲೆವಲ್ 160ಕ್ಕೆ ಬಂದಿದ್ದು, ಶ್ರೀಗಳಿಗೆ ಇನ್ನೂ ಕೆಲ ಪರೀಕ್ಷೆಗಳನ್ನು ಮಾಡಿಸಬೇಕಿದೆ. ಆದ್ರೆ, ಆಸ್ಪತ್ರೆಗೆ ಭಕ್ತರು ಬರುತ್ತಿದ್ದರಿಂದ ಶ್ರೀಗಳನ್ನು ಬೇರೆಡೆ ಸ್ಥಳಾಂತರಕ್ಕೆ ಯೋಚಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ