Breaking News

ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್; 1 ದಿನದ ವೇತನ ಸಹಿತ ಋತು ಚಕ್ರ ರಜೆ

Spread the love

ಬೆಂಗಳೂರು: ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ ಋತು ಚಕ್ರ ರಜೆ ನೀತಿ 2025ಗೆ ಸಚಿವ ಸಂಪುಟ ಸಭೆ ಇಂದು ಒಪ್ಪಿಗೆ ಸೂಚಿಸಿದೆ.‌

ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್ MNCಗಳು, IT ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ “ಋತು ಚಕ್ರ ರಜೆ ನೀತಿ 2025” (Menstrual Leave Policy, 2025)ನ್ನು ಜಾರಿಗೆ ತರಲು ಅನುಮೋದನೆ ನೀಡಲಾಗಿದೆ.

ಸರ್ಕಾರಿ, ಖಾಸಗಿ ಕಂಪನಿ ಸೇರಿದಂತೆ ಉದ್ಯೋಗ ಮಾಡುತ್ತಿರುವ ಎಲ್ಲಾ ಮಹಿಳೆಯರಿಗೆ ಋತು ಚಕ್ರ ರಜೆ ನೀಡಲು ತೀರ್ಮಾನಿಸಿದೆ. ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿಗಳು, ಐಟಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ ನಿಯಮವನ್ನು ಅನುಷ್ಠಾನಗೊಳಿಸಲಾಗುತ್ತದೆ.

ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ಋತು ಚಕ್ರ ರಜೆ ನೀಡುವ ಸಂಬಂಧ ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ವಿಭಾಗದ ಮುಖ್ಯಸ್ಥೆ ಸಪ್ನಾ ಎಸ್. ಅವರ ಅಧ್ಯಕ್ಷತೆಯ 18 ಸದಸ್ಯರ ಸಮಿತಿ ಶಿಫಾರಸು ಮಾಡಿತ್ತು. ಮುಟ್ಟಿನ ಅವಧಿಯಲ್ಲಿ ಎದುರಾಗುವ ಶಾರೀರಿಕ ಬದಲಾವಣೆಗಳಿಂದ ಉದ್ಯೋಗಸ್ಥ ಮಹಿಳೆಯರು ಅನುಭವಿಸುವ ಸಂಕಷ್ಟ, ಸವಾಲುಗಳು, ಕೆಲಸ ಮಾಡುವ ಸ್ಥಳಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಅನುಸರಿಸಬೇಕಾದ ನಿಯಮಗಳು, ವಿಶ್ರಾಂತಿಯ ಅಗತ್ಯತೆ ಕುರಿತು ಸಮಿತಿಯ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ