Breaking News

 ವಸ್ತುಪ್ರದರ್ಶನ ಮೈದಾನದಲ್ಲಿ ದಸರಾದಲ್ಲಿ  ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ (Girl) ಶವ ಪತ್ತೆಯಾಗಿದೆ.

Spread the love

ಮೈಸೂರು, (ಅಕ್ಟೋಬರ್ 09): ವಸ್ತುಪ್ರದರ್ಶನ ಮೈದಾನದಲ್ಲಿ ದಸರಾದಲ್ಲಿ (Mysuru Dasara 2025) ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ (Girl) ಶವ ಪತ್ತೆಯಾಗಿದೆ.

ಬಾಲಕಿಯ ದೇಹದ ಮೇಲೆ ಬಟ್ಟೆ ಇಲ್ಲದೆ ಮೃತದೇಹ ಪತ್ತೆಯಾದ ಕಾರಣ ಅತ್ಯಾಚಾರ ಎಸಗಿ ಕೊಲೆ (Rape and Murder) ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಮೈಸೂರು ದಸರಾ ಯಾವುದೇ ತೊಂದರೆಗಳಿಲ್ಲದೇ ಅದ್ಧೂರಿ ತೆರೆಕಂಡಿದೆ ಎನ್ನುವಷ್ಟರಲ್ಲೇ ಈ ಪೈಶಾಚಿಕ ಕೃತ್ಯ ನಡೆದಿದೆ.ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ (Kalaburagi) ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50 ಕ್ಕೂ ಹೆಚ್ಚು ಕುಟುಂಬ ಬಂದಿವೆ.

ಇವರು ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು.

ಆದ್ರೆ, ಹಿಂದಿನ ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಆದ್ರೆ, ಬೆಳಗ್ಗೆ ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂದ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಇಂದು (ಅಕ್ಟೋಬರ್ 09) ಬೆಳಗ್ಗೆ 6:30ರ ಸುಮಾರಿಗೆ ಜೋಪಡಿಯ ಪಕ್ಕದ ಗುಂಡಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಶವದ ಮೇಲೆ ಸರಿಯಾಗಿ ಬಟ್ಟೆಯಿರಲಿಲ್ಲ, ಇದರಿಂದ ಕುಟುಂಬಸ್ಥರು ಅತ್ಯಾ೧ಚಾರ ಮತ್ತು ಕೊಲೆಯ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ನಡೆದ ಕೇವಲ ಎರಡು ದಿನಗಳ ಹಿಂದೆ, ಇದೇ ಸ್ಥಳದ ಮತ್ತೊಂದು ಬದಿಯಲ್ಲಿ ಒಬ್ಬ ವ್ಯಕ್ತಿಯ ಬರ್ಬರ ಹತ್ಯೆ ನಡೆದಿತ್ತು. ಒಟ್ಟಾರೆ ಎರಡು ದಿನಗಳ ಅಂತರದಲ್ಲಿ ಒಂದೇ ಸ್ಥಳದಲ್ಲಿ ಎರಡು ಕೊಲೆ ಘಟನೆಗಳು ನಡೆದಿರುವುದು ಆಘಾತಕಾರಿಯಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ