Breaking News

ಅನ್ನಭಾಗ್ಯ ಯೋಜನೆಯ 5 ಕೆಜಿ ಅಕ್ಕಿಗೆ ಕತ್ತರಿ: ಇಂದಿರಾ ಆಹಾರ ಕಿಟ್ ಭಾಗ್ಯ,

Spread the love

ಬೆಂಗಳೂರು, ಅಕ್ಟೋಬರ್​ 09: ಉಚಿತ ಅನ್ನಭಾಗ್ಯ ಯೋಜನೆ ಮೂಲಕ ಮನೆಮಾತಾಗಿರುವ ಕರ್ನಾಟಕ ಸರ್ಕಾರ ಇದೀಗ ಅನ್ನಭಾಗ್ಯ ಯೋಜನೆಯಡಿ (anna bhagya) ಬಿಪಿಎಲ್​ ಕಾರ್ಡ್​ ಫಲಾನುಭವಿಗಳಿಗೆ ಇಂದಿರಾ ಕಿಟ್​ನಲ್ಲಿ ಪೌಷ್ಟಿಕ ಆಹಾರ ವಿತರಣೆಗೆ ಇಂದಿನ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಆ ಮೂಲಕ ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿ ಬದಲು ಆಹಾರ ಧಾನ್ಯಗಳ ವಿತರಣೆ ಮಾಡಲಾಗುತ್ತದೆ.ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 5 ಕೆಜೆ ಅಕ್ಕಿಯನ್ನು ಸೇರಿಸಿ ಒಟ್ಟು 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಈ ಮುಂಚೆ ಅಕ್ಕಿಯ ಅಭಾವ ಹಿನ್ನಲೆ  ಫಲಾನುಭವಿಗಳ ಖಾತೆಗೆ 175 ರೂ ಜಮಾ ಮಾಡಲಾಗುತ್ತಿತ್ತು.

ಅಕ್ಕಿಯ ದರ ಇಳಿಕೆ ಆದ ಬಳಿಕ ಕಳೆದ ಕೆಲ ತಿಂಗಳಿನಿಂದ ಮತ್ತೆ ಹಣದ ಬದಲಾಗಿ ಉಚಿತ ಅಕ್ಕಿ ನೀಡಲಾಗುತ್ತಿದೆ. ಇದೀಗ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಇಂದಿರಾ ಕಿಟ್​ನಲ್ಲಿ ಪೌಷ್ಟಿಕ ಆಹಾರ ವಿತರಣೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.

ಇಂದಿರಾ ಆಹಾರ ಕಿಟ್​ನಲ್ಲಿ ಏನೇನು ಇರಲಿದೆ 

ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿ ಬದಲು ಆಹಾರ ಧಾನ್ಯಗಳ ವಿತರಣೆ ಮುಂದಾಗಿದೆ. ಇಂದಿರಾ ಆಹಾರ ಕಿಟ್​ನಲ್ಲಿ ತೊಗರಿಬೆಳೆ, ಅಡುಗೆ ಎಣ್ಣೆ, ಉಪ್ಪು ಮತ್ತು ಸಕ್ಕರೆ ವಿತರಿಸಲು ನಿರ್ಧರಿಸಲಾಗಿದೆ. ಅನ್ನಭಾಗ್ಯ ಯೋಜನೆ ಅಕ್ಕಿ ಕಳ್ಳ ಸಾಗಾಟವಾಗುತ್ತಿದ್ದ ಹಿನ್ನೆಲೆ ಅದಕ್ಕೆ ಕಡಿವಾಣ ಹಾಕಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಸಂಪುಟ ಸಭೆಯಲ್ಲಿ ಕೈಗೊಂಡ ಇತರೆ ಪ್ರಮುಖ ನಿರ್ಧಾರಗಳು

  • 2025-26ನೇ ಸಾಲಿನ ರಸಗೊಬ್ಬರ ದಾಸ್ತಾನಿಗೆ 200 ಕೋಟಿ ರೂ. ಸಾಲಕ್ಕೆ ಬಂಡವಾಳ ಖಾತ್ರಿ ನೀಡುವುದಕ್ಕೆ ಒಪ್ಪಿಗೆ ನೀಡಲಾಗಿದೆ. ಜಲಾನಯನ ಅಭಿವೃದ್ಧಿ ಘಟಕ, ಪ್ರಧಾನಮಂತ್ರಿ ಕೃಷಿ ಸಿಂಚಯಿ ಹೆಚ್ಚುವರಿ 15 ಯೋಜನೆಗಳು 15 ತಾಲೂಕುಗಳಲ್ಲಿ 90 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಂಪುಟ ಒಪ್ಪಿಗೆ ನೀಡಿದೆ.
  • ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ದೊರೆತಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ