Breaking News

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಮುದ್ದಿನ ಪಾಳ್ಯದ ಶಾಂತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ನಡೆಯುತ್ತಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಉಮೇಶ್‌ ಅವರಿಗೆ 80 ವರ್ಷ ವಯಸ್ಸಾಗಿದೆ. ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ಇವರು 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ವಿಶೇಷವಾಗಿ ಹಾಸ್ಯಪಾತ್ರಗಳಲ್ಲಿ ಗಮನ ಸೆಳೆದಿದ್ದಾರೆ.ಕನ್ನಡದ ದಿಗ್ಗಜ ನಟರಾದ ಡಾ.ರಾಜ್​ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಪುನೀತ್ ರಾಜ್‍ಕುಮಾರ್, ಶಿವರಾಜ್​ಕುಮಾರ್ ಹೀಗೆ ಸಾಕಷ್ಟು ನಟರ ಸಿನಿಮಾಗಳಲ್ಲಿ ಉಮೇಶ್ ಅಭಿನಯಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ