Breaking News

ನಾನು ದನದ ಮಾಂಸ ತಿನ್ನುತ್ತೇನೆ. ಬೇಡ ಎನ್ನಲು ನೀನು ಯಾವನು: ಸಿದ್ದರಾಮಯ್ಯ

Spread the love

ಬೆಂಗಳೂರು, ಡಿ.28- ನಾನು ದನದ ಮಾಂಸ ತಿನ್ನುತ್ತೇನೆ. ಅದನ್ನು ಬೇಡ ಎನ್ನಲು ನೀನು ಯಾವನು ಎಂದು ಪ್ರಶ್ನಿಸುವ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನನ್ನು ಬಲವಾಗಿ ವಿರೋಧಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಕಾಂಗ್ರೆಸ್‍ನ 136ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಹೊಸದಲ್ಲ.

1964ರಲ್ಲೆ ಕಾಂಗ್ರೆಸ್ ಜಾರಿಗೆ ತಂದಿತ್ತು. ಈಗ ಅದನ್ನು ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲು ಮುಂದಾಗಿದೆ. ಆಯ್ತಪ್ಪಾ ನಾನು ದನದ ಮಾಂಸ ತಿನ್ನುತ್ತೇನೆ. ನೀನು ಯಾವನ್ನಯ್ಯ ಕೇಳೋಕೆ. ನೀನು ತಿನ್ನು ಎಂದು ನಾನು ಬಲವಂತ ಮಾಡಲ್ಲ. ನನ್ನ ಆಹಾರ ನನ್ನ ಇಷ್ಟ. ಅದನ್ನು ಕೇಳೋಕೆ ನೀನು ಯಾರು ಎಂಬುದನ್ನು ಹೇಳೋಕೆ ಹೆಚ್ಚು ಧೈರ್ಯ ಬೇಕಿಲ್ಲ ಎಂದರು.

ಮುದಿ ಹಸು, ಎತ್ತು, ಕೋಣಗಳನ್ನು ಸಾಕಲಾಗದ ರೈತರು ಏನು ಮಾಡಬೇಕು. ಇವುಗಳನ್ನು ಸಾಕಲು ದಿನವೊಂದಕ್ಕೆ 100 ರೂಪಾಯಿ ಬೇಕು. ನಿಜ ನಾವು ಹಸುವನ್ನು ದೇವರೆಂದು ಪೂಜಿಸುತ್ತೇವೆ. ರೈತರು ಪೂಜೆ ಮಾಡುತ್ತಾರೆ ಎಂದರು.
ನಾನು ಸಿದ್ಧಾಂತಕ್ಕೆ ಬದ್ಧವಾಗಿದ್ದೇನೆ. ನಾವು ನಂಬಿರುವ ಸಿದ್ಧಾಂತಗಳನ್ನು ಗಟ್ಟಿಯಾಗಿ ಹೇಳಬೇಕು. ಕಾಂಗ್ರೆಸ್‍ಗೆ ಹಿನ್ನೆಡೆಯಾದರೆ ದೇಶದ ಬಡವರಿಗೆ, ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ಅಲ್ಪಸಂಖ್ಯಾತರಿಗೆ ಹಿನ್ನೆಡೆಯಾದಂತೆ ಎಂದು ಹೇಳಿದರು.

ಯುವಕರು ಕಾಂಗ್ರೆಸ್ ಪಕ್ಷ ಸಿದ್ದಾಂತ ಬಗ್ಗೆ ತಿಳಿದು ಕೊಳ್ಳಬೇಕು. ಸಿದ್ದಾಂತ ಗೊತ್ತಿಲ್ಲದೆ ಹೋರಾಟ ಮಾಡಿದ್ರೆ ಪ್ರಯೋಜನವಿಲ್ಲ. ಕಾಂಗ್ರೆಸ್‍ನಲ್ಲಿ ಎಷ್ಟೋ ಜನರಿಗೆ ಪಕ್ಷದ ಸಿದ್ದಾಂತವೇ ಗೊತ್ತಿಲ್ಲ. ಸಾಮಾಜಿಕ ನ್ಯಾಯದ ಬಗ್ಗೆ ಕೇಳಿದರೆ ಗೊತ್ತಿಲ್ಲ ಎನ್ನುತ್ತಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದ ಪರ ಇದೆ. ಅದನ್ನು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ಡೋಂಗಿತನ, ಸೋಗಲಾಡಿತನ ಜನರ ಮುಂದೆ ಹೇಳಬೇಕು. ನಮ್ಮ ವಿಚಾರಗಳಲ್ಲಿ ಬದ್ಧತೆ ಇರಬೇಕು ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ