ಸುಪ್ರೀಂ ಕೋರ್ಟ್ ಸಿಜೆಐ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ಕೃತ್ಯಕ್ಕೆ ಖಂಡನೆ
ಬಾಗಲಕೋಟೆಯಲ್ಲಿ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ
ಸುಪ್ರೀಂ ಕೋರ್ಟ್ ಸಿಜೆಐ ಬಿ.ಆರ್. ಗವಾಯಿ ಮೇಲೆ ಶೂ ಎಸೆತ
ಕೃತ್ಯವನ್ನು ಖಂಡಿಸಿದ ಕಾನೂನು ವಿದ್ಯಾರ್ಥಿಗಳು
ಬಾಗಲಕೋಟೆಯಲ್ಲಿ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ
ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹ
ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಕೃತ್ಯವನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಯಿತು.
ಜಮಖಂಡಿ ಬಿ.ಎಲ್.ಡಿ.ಇ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ನಗರದ ದೇಸಾಯಿ ವೃತ್ತದಲ್ಲಿ ಈ ಪ್ರತಿಭಟನೆ ನಡೆಸುವ ಮೂಲಕ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಈ ದಾಳಿಯ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಅತ್ಯುನ್ನತ ನ್ಯಾಯಾಲಯದ ಮುಖ್ಯಸ್ಥರಿಗೇ ರಕ್ಷಣೆ ಇಲ್ಲದಿರುವುದನ್ನು ಖಂಡಿಸಿದ ವಿದ್ಯಾರ್ಥಿಗಳು, ಈ ಹೇಯ ಕೃತ್ಯವು ನ್ಯಾಯಾಂಗಕ್ಕೇ ಮಾಡಿದ ಅಪಮಾನ ಎಂದರು.
ನ್ಯಾಯಾಂಗದ ಘನತೆಗೆ ಧಕ್ಕೆ ತಂದಿರುವ ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.
ದೇಶದ ನ್ಯಾಯಾಂಗ ವ್ಯವಸ್ಥೆಯ ಸಾರ್ವಭೌಮತೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಆಗ್ರಹಿಸಲಾಯಿತು.
ಪ್ರತಿಭಟನೆಯ ನಂತರ, ವಿದ್ಯಾರ್ಥಿಗಳು ಜಮಖಂಡಿ ತಾಲೂಕಾ ದಂಡಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
Laxmi News 24×7