Breaking News

ಪ್ರಾಣ ರಕ್ಷಣೆ :RPF ಸಿಬ್ಬಂದಿಯ ಸಾಹಸಕ್ಕೆ ಮೆಚ್ಚುಗೆ

Spread the love

ಬೆಳಗಾವಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ ರೈಲಿನಿಂದ ಬಿದ್ದ ವೃದ್ಧರೊಬ್ಬರನ್ನು ಕ್ಷಣಾರ್ಧದಲ್ಲಿ RPF ಸಿಬ್ಬಂದಿ ರಕ್ಷಿಸಿದ ಘಟನೆ ನಿನ್ನೆ ಬೆಳಗಾವಿ ರೈಲು ನಿಲ್ದಾಣದಲ್ಲಿ ನಡೆದಿದೆ.
ಜಿಲ್ಲೆಯ ಉಚ್ಚಗಾಂವ ಸಮೀಪದ ಬಸುರತೆ ಗ್ರಾಮದ ನಿವಾಸಿಯಾದ ಶ್ರೀ ಬರಮಾ ಗಂಗರಾಮ ಕುಂಬಾರ (ವಯಸ್ಸು 55) ಎಂಬುವರು ಬೆಳಗಾವಿ ಯಿಂದ ಪುಣೆಗೆ ತೆರಳುವ ತಮ್ಮ
ಮೊಮ್ಮಗನಾದ ಶ್ರೀ ಲಕ್ಷ್ಮಿ ರಾಜಾರಾಮ ಕುಂಬಾರ ಅವರನ್ನು ಮೈಸೂರು–ಅಜ್ಮೀರ್ ಎಕ್ಸ್‌ಪ್ರೆಸ್ ರೈಲಿಗೆ ( ಸಂಖ್ಯೆ16210) ಬೀಳ್ಕೊಡಲು ಬಂದಿದ್ದರು.
ಆಗ ರೈಲು ಚಲಿಸಲು ಪ್ರಾರಂಭಸಿದಾಗ ಬೀಳ್ಕೊಡಲು ಬಂದ ಅವರು ಆತಂಕಗೊಂಡು ಚಲಿಸುತ್ತಿರುವ ರೈಲಿನಿಂದ ಇಳಿಯಲು ಯತ್ನಿಸಿದಾಗ ಶ್ರೀ ಬರಮಾ ಗಂಗರಾಮ ಕುಂಬಾರ ಜಾರಿಬಿದ್ದು, ಪ್ಲಾಟ್ಫಾರ್ಮ್ ಹಾಗೂ ರೈಲಿನ
ನಡುವಿನ ಚಿಕ್ಕ ಜಾಗದಲ್ಲಿ ಸಿಲುಕಿಕೊಡಿದರು. ಇದನ್ನು ಕರ್ತವ್ಯ ನಿರತ RPF ಹೆಡ್ ಕಾನ್ಸ್ಟೇಬಲ್ ಶ್ರೀ. C.I. ಕೊಪ್ಪದ ಗಮನಿಸಿ ತಕ್ಷಣ, ಧೈರ್ಯದಿಂದ ಮುನ್ನುಗಿ ಸಿಲುಕುತ್ತಿದ್ದ ವಯಸ್ಕರನ್ನು ರಕ್ಷಿಸಿದರು. ನಂತರ ಅವರನ್ನು ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಹೆಡ್ ಕಾನ್ಸ್ಟೇಬಲ್ ಸಿ. ಐ. ಕೊಪ್ಪದ ಅವರ ಜಾಗರೂಕತೆ ಹಾಗೂ ಕರ್ತವ್ಯ ನಿಷ್ಠೆ ಯಿಂದ ಅನಾಹುತ ತಪ್ಪಿದೆ. ಇವರ ಈ ಸಾಹಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.RPF ಹೆಡ್ ಕಾನ್ಸ್ಟೇಬಲ್ ಸಿ. ಐ. ಕೊಪ್ಪದ ಸದ್ಯ ಬೆಳಗಾವಿ RPF ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ