Breaking News

ಇಂದು ಬೆಳಗಾವಿಯ ಗಾಂಧಿ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆದ ‘ಕನ್ನಡ ದೀಕ್ಷೆ’ ಪ್ರತಿಜ್ಞಾ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಲಾಯಿತು.

Spread the love

ಇಂದು ಬೆಳಗಾವಿಯ ಗಾಂಧಿ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆದ ‘ಕನ್ನಡ ದೀಕ್ಷೆ’ ಪ್ರತಿಜ್ಞಾ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಲಾಯಿತು.
ಕನ್ನಡದ ಘನತೆ, ಪ್ರೀತಿ ಮತ್ತು ಅಸ್ತಿತ್ವವನ್ನು ರಕ್ಷಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಪ್ರತಿಜ್ಞೆ ಕೈಗೊಂಡೆವು. ಕನ್ನಡದ ಹಿತಾಸಕ್ತಿ, ರಾಜ್ಯದ ಗೌರವ ಮತ್ತು ನಮ್ಮ ಸಾಂಸ್ಕೃತಿಕ ಗುರುತನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ ಎಂಬ ಪ್ರಮುಖ ಸಂದೇಶವನ್ನು ಈ ಸಮಾರಂಭವು ಸಾರಿತು.
ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿಯವರು ಹಾಗೂ ಅಥಣಿಯ ಮೋಟಗಿ ಮಠದ ಶ್ರೀ ಪ್ರಭುಚನ್ನಬಸವ ಮಹಾಸ್ವಾಮೀಜಿಯವರು ದಿವ್ಯ ಸಾನ್ನಿಧ್ಯವನ್ನು‌ ವಹಿಸಿದ್ದರು.
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರು ಶ್ರೀ ಟಿ.ಎ. ನಾರಾಯಣಗೌಡರು, ರಾಜ್ಯ ಸಂಚಾಲಕರಾದ ಶ್ರೀ ಸುರೇಶ ಗವನ್ನವರ, ಜಿಲ್ಲಾ ಘಟಕದ ಅಧ್ಯಕ್ಷರು ಶ್ರೀ ದೀಪಕ ಗುಡಗನಟ್ಟಿ, ಕನ್ನಡ ಸಂಘಟನೆಗಳ ಮುಖಂಡರು, ಯುವಕರು ಮತ್ತು ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ–ಮೀರಜ್–ಬೆಳಗಾವಿ ಪ್ಯಾಸೆಂಜರ್ ವಿಶೇಷ ರೈಲುಗಳ ಖಾಯಂಗೆ ರೈಲ್ವೆ ಮಂಡಳಿ ಅನುಮೋದನೆ

Spread the love ಹುಬ್ಬಳ್ಳಿ: ದೈನಂದಿನ ವಿಶೇಷ ಪ್ಯಾಸೆಂಜರ್ ರೈಲುಗಳನ್ನು ಖಾಯಂಗೊಳಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲ್ವೆ ಮಂಡಳಿಯು ರೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ