Breaking News

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love

ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ವಿರುದ್ದ ಗಂಭೀರ ವಂಚನೆ ತನಿಖಾ ವಿಭಾಗದ ಕಚೇರಿಯಿಂದ (ಎಸ್‌ಎಫ್ಐಒ) ನಡೆಯುತ್ತಿರುವ ತನಿಖೆ ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ, ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.

ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ನಿರ್ದೇಶಕಿ ವೀಣಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾ.ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ, ಎಸ್‌ಎಫ್‌ಐಒ ನಿರ್ದೇಶಕರು, ಕೇಂದ್ರದ ಕಾರ್ಪೊರೇಟ್‌ ವ್ಯವಹಾರಗಳ ಸಚಿವಾಲಯಕ್ಕೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಡಿಸೆಂಬರ್‌ 3ಕ್ಕೆ ಮುಂದೂಡಿದೆ.

ವಿಚಾರಣೆಯ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಕ್ಷಣೆ ನೀಡಬೇಕು ಎಂದು ಕೋರಿದರು. ಇದಕ್ಕೆ ನಿರಾಕರಿಸಿದ ನ್ಯಾಯಪೀಠ, ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿದೆ. ಎಸ್‌ಎಫ್‌ಐಒ ತನಿಖೆ ಕುರಿತಂತೆ ಕಾನೂನಿನ ಪ್ರಶ್ನೆಯಿದ್ದು, ಪರಿಶೀಲಿಸಬೇಕಾಗಿದೆ. ಹೀಗಾಗಿ, ಈ ಹಂತದಲ್ಲಿ ಮಧ್ಯಪ್ರವೇಶ ಮಾಡುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿತು.

ಪ್ರಕರಣದ ಹಿನ್ನೆಲೆ: ಮೇಲ್ಮವಿದಾರರಾದ ವೀಣಾ ಪಿಣರಾಯಿ ವಿಜಯನ್ ನಿರ್ದೇಶಕರಾಗಿರುವ ಎಕ್ಸಲಾಜಿಕ್ ಸಲ್ಯೂಷನ್ಸ್ ಎಂಬ ಐಟಿ ಕಂಪನಿಯ ವಿರುದ್ಧ ತನಿಖೆ ನಡೆಸುವಂತೆ ‘ಗಂಭೀರ ವಂಚನೆ ತನಿಖಾ ವಿಭಾಗ’ದ ಅಧಿಕಾರಿಗಳಿಗೆ (ಎಸ್ಎಫ್ಐಒ) ಕೇಂದ್ರ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯ ಆದೇಶಿಸಿತ್ತು.

ಕೇಂದ್ರ ಸರ್ಕಾರದ ಈ ಆದೇಶ ದೋಷಪೂರಿತವಾಗಿದೆ. ಸೂಕ್ತ ಕಾರಣವಿಲ್ಲದೇ ತನಿಖೆಗೆ ಆದೇಶಿಸಿದ್ದು ನೈಸರ್ಗಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಜೊತೆಗೆ, ಸಂವಿಧಾನದ ಪರಿಚ್ಛೇದ 14 ಮತ್ತು 21ಕ್ಕೆ ವಿರುದ್ಧವಾಗಿದೆ. ಕೊಚ್ಚಿನ್ ಮಿನರಲ್ಸ್ ರುಟೈಲ್ ಲಿಮಿಟೆಡ್ (ಸಿಎಂಆರ್​ಎಲ್) ಮತ್ತು ಅರ್ಜಿದಾರರ ಕಂಪನಿ ನಡುವಿನ ವ್ಯವಹಾರಗಳಿಗೆ ಸಂಬಂಧಿಸಿದ 2021ರಲ್ಲಿ ಪರಿಶೀಲಿಸಿದ್ದ ಕೇಂದ್ರ ಸರ್ಕಾರದ ಸಂದರ್ಭದಲ್ಲಿ ಕಂಪನಿ ಕಾಯಿದೆಯ ವಿವಿಧ ನಿಬಂಧನೆಗಳ ಅಡಿ ತನಿಖೆ ನಡೆಸಬೇಕು ಎಂದು ಬೆಂಗಳೂರಿನ ರಿಜಿಸ್ಟ್ರಾರ್ ಅವರಿಂದ ಅರ್ಜಿದಾರರಿಗೆ ಪತ್ರ ಬರೆಯಲಾಗಿತ್ತು.


Spread the love

About Laxminews 24x7

Check Also

9 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ; ಅಧಿಕೃತ ಘೋಷಣೆ

Spread the love9 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ; ಅಧಿಕೃತ ಘೋಷಣೆ     Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ