Breaking News

ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!

Spread the love

ಬೆಂಗಳೂರು/ಮಂಗಳೂರು, (ಅಕ್ಟೋಬರ್ 13): ಗಡಿಪಾರು ಆದೇಶ ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್  (Karnataka High Court) ಪುರಸ್ಕರಿಸಿದೆ. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಪೂರ್ಣಗೊಳಸಿದ್ದು, ಆದೇಶ ಕಾಯ್ದಿರಿಸಿದೆ. ಆದ್ರೆ, ಮುಂದಿನ ಆದೇಶದವರೆಗೆ ಬಲವಂತದ ಕ್ರಮ ಬೇಡ. ಗಡಿಪಾರು ಜಾರಿಗೊಳಿಸದಂತೆ ಮಹತ್ವದ ಸೂಚನೆ ನೀಡಿದೆ. ಇದರೊಂದಿಗೆ ಮಹೇಶ್ ಶೆಟ್ಟಿ ತಿಮರೋಡಿ ತಾತ್ಕಾಲಿಕವಾಗಿ ಗಡಿಪಾರಿನಿಂದ ಪಾರಾಗಿದ್ದಾರೆ.

ಧರ್ಮಸ್ಥಳದ (Dharmasthala) ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarody) ಮಂಗಳೂರಿನಿಂದ ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷಗಳ ಕಾಲ ಅವರನ್ನು ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ