Breaking News

ಕಾರ್ಖಾನೆಯ ಎಲ್ಲ ವಿಭಾಗ ಪರಿಶೀಲಿಸಿ, ಕಾರ್ಮಿಕರ ಅಹವಾಲು ಆಲಿಸಿದ ಚನ್ನರಾಜ ಹಟ್ಟಿಹೊಳಿ

Spread the love

ಕಾರ್ಖಾನೆಯ ಎಲ್ಲ ವಿಭಾಗ ಪರಿಶೀಲಿಸಿ, ಕಾರ್ಮಿಕರ ಅಹವಾಲು ಆಲಿಸಿದ ಚನ್ನರಾಜ ಹಟ್ಟಿಹೊಳಿ
ಎಂ.ಕೆ. ಹುಬ್ಬಳ್ಳಿ: ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿದ ನೂತನ ಅಧ್ಯಕ್ಷ ಚನ್ನರಾಜ ಹಟ್ಟಿಹೊಳಿ, ಕಾರ್ಖಾನೆಯ ಪ್ರತಿಯೊಂದು ವಿಭಾಗವನ್ನು ಪರಿಶೀಲಿಸಿ, ಕಾರ್ಯ ನಿರ್ವಹಣೆಯ ಬಗ್ಗೆ ಸಮಗ್ರ ಮಾಹಿತಿ ಪಡೆದರು.
ನಂತರ ಕಾರ್ಖಾನೆಯ ಕಾರ್ಮಿಕರೊಂದಿಗೆ ಸಭೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದರು.
ಕಾರ್ಖಾನೆಯ ಅಭಿವೃದ್ಧಿ, ಕಾರ್ಮಿಕರ ಕಲ್ಯಾಣ ಮತ್ತು ಬರುವ ಕಬ್ಬು ಹಂಗಾಮಿನ ನಿರ್ವಹಣೆಯ ಕುರಿತು ವಿಸ್ತೃತ ಚರ್ಚೆ ನಡೆಸಿ, ಎಲ್ಲ ವಿಭಾಗಗಳ ಸಮನ್ವಯದೊಂದಿಗೆ ಪೂರ್ವ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಕಾರ್ಮಿಕರು ನೂತನ ಅಧ್ಯಕ್ಷರನ್ನು ಸನ್ಮಾನಿಸಿದರು.
ಈ ವೇಳೆ ಕಾರ್ಖಾನೆಯ ಆಡಳಿತ ಮಂಡಳಿಯ ನಿರ್ದೇಶಕರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ