Breaking News

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love

ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾಗವಾಡ ತಾಲೂಕಿನಿಂದ 15 ಕಿ.ಮೀ ದೂರದಲ್ಲಿರುವ ಮಹಾರಾಷ್ಟ್ರದ ಮಿರಜ್‌ನ ಗಾಂಧಿ ಚೌಕ್ ಠಾಣೆ ಪೊಲೀಸರು ದಾಳಿ ನಡೆಸಿ, ನಕಲಿ ನೋಟು ತಯಾರಿಕೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಲ್ಲಿ ಓರ್ವ ಮಹಾರಾಷ್ಟ್ರದ ಸಂಚಾರಿ ಪೊಲೀಸ್ ಠಾಣೆಯೊಂದರ ವಾಹನ ಚಾಲಕ ಎನ್ನುವುದು ವಿಶೇಷ. ಬಂಧಿತರಿಂದ ಒಂದು ಕಾರು, ನಕಲಿ ನೋಟು ಮುದ್ರಿಸಲು ಬಳಸಿದ ಪ್ರಿಂಟರ್, ಪೇಪರ್ ಹಾಗೂ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಕಲಿ ನೋಟು ತಯಾರಿಕೆ, ವಹಿವಾಟು ವಿಚಾರವಾಗಿ ಸಾಂಗ್ಲಿ, ಕೊಲ್ಲಾಪುರ ಮತ್ತು ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ