Breaking News

ಕವಿವಿ ಪ್ರವೇಶ ಶುಲ್ಕ ಹೆಚ್ಚಳ ನಡೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ..ಧಾರವಾಡ ಕವಿವಿ ಆಡಳಿತ ಮಂಡಳಿ ಎದುರು ವಿದ್ಯಾರ್ಥಿಗಳ ಪ್ರೊಟೆಸ್ಟ್

Spread the love

ಕವಿವಿ ಪ್ರವೇಶ ಶುಲ್ಕ ಹೆಚ್ಚಳ ನಡೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ..ಧಾರವಾಡ ಕವಿವಿ ಆಡಳಿತ ಮಂಡಳಿ ಎದುರು ವಿದ್ಯಾರ್ಥಿಗಳ ಪ್ರೊಟೆಸ್ಟ್……
: ಕವಿವಿಯ ಪಿಜಿ ಡಿಪ್ಲೋಮಾ ಕೋರ್ಸ್ ಹಾಗೂ ವಸತಿ ನಿಲಯ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಹಾಗೂ ಹೆಚ್ಚಳ ಶುಲ್ಕ ಕೈ ಬಿಡುವಂತೆ ಆಗ್ರಹಿಸಿ, ಧಾರವಾಡದಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು ಒ್ರತಿಭಟನೆ ನಡೆಸಿ ಕವಿವಿ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.
– ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಗುರುವಾರ ಪ್ರತಿಭಟನಾ ಧರಣಿ ನಡೆಸಿದ ವಿದ್ಯಾರ್ಥಿಗಳು, ಕವಿವಿ ಪ್ರವೇಶ ಶುಲ್ಕ ಹೆಚ್ಚಳ ನಡೆಸಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕವಿವಿ ಪಿಜಿ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಿಶ್ವವಿದ್ಯಾಲಯವು 2025-26ನೇ ಸಾಲಿನ ಪಿ.ಜಿ. ಡಿಪ್ಲೋಮಾ ಕೋರ್ಸ್ ಹಾಗೂ ವಸತಿ ನಿಲಯದ ಪ್ರವೇಶ ಶುಲ್ಕವನ್ನು ಗಣನೀಯವಾಗಿ ಹೆಚ್ಚಿಸಿದೆ. ಈ ಹೆಚ್ಚಳವು ಸಾಮಾನ್ಯ ವಿದ್ಯಾರ್ಥಿಗಳ ಆರ್ಥಿಕ ಸ್ಥಿತಿಗೆ ದೊಡ್ಡ ಹೊರೆ ಉಂಟು ಮಾಡುತ್ತದೆ.
ಗ್ರಾಮೀಣ ಹಿನ್ನೆಲೆಯಿಂದ ಬರುವ ಮತ್ತು ಸ್ವಂತ ಆರ್ಥಿಕ ಸಾಮರ್ಥ್ಯದಿಂದಲೇ ಶಿಕ್ಷಣ ಮುಂದುವರೆಸುತ್ತಿರುವ ಅನೇಕ ವಿದ್ಯಾರ್ಥಿಗಳಿಗೆ ಈ ಹೆಚ್ಚಿನ ಶುಲ್ಕ ಭರಿಸುವುದು ಕಷ್ಟಕರವಾಗಿದೆ. ಶಿಕ್ಷಣವು ಎಲ್ಲರಿಗೂ ಸಮಾನವಾಗಿ ಲಭ್ಯವಾಗಬೇಕಾದ ಹಕ್ಕು ಎಂಬ ದೃಷ್ಟಿಯಿಂದ ಈ ನಿರ್ಧಾರವನ್ನು ಪುನರ್ವಿಚಾರಿಸಿ,
ಹಳೆಯ ಮಟ್ಟದ ಶುಲ್ಕ ಅಥವಾ ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಪ್ರಮಾಣದಲ್ಲಿ ಶುಲ್ಕವನ್ನು ನಿಗದಿಪಡಿಸಬೇಕು ಹಾಗೆಯೇ ವಸತಿ ನಿಲಯದ ಪ್ರವೇಶ ಶುಲ್ಕವನ್ನೂ ಕೂಡ ಹಿಂದಿನ ಮಟ್ಟಕ್ಕೆ ಇಳಿಸುವ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಒಂದುವೇಳೆ ಶುಲ್ಕ ಇಳಿಕೆಗೆ ಮುಂದಾಗದಿದ್ದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ