Breaking News

ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ಖಂಡಿಸಿ ಬಸವ ಜನ್ಮ ಸ್ಥಳದಲ್ಲಿ ಪ್ರತಿಭಟನೆ

Spread the love

ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ಖಂಡಿಸಿ ಬಸವ ಜನ್ಮ ಸ್ಥಳದಲ್ಲಿ ಪ್ರತಿಭಟನೆ

ನೆರೆಯ ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ-ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗಾಯತ ಮಠಾಧೀಶರ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ವಿಜಯಪುರ ಜಿಲ್ಲೆಯ ಬಸವ ಜನ್ಮ ಸ್ಥಳ ಬಸವನಬಾಗೇವಾಡಿ ಪಟ್ಟಣದಲ್ಲಿ ವಿವಿಧ ಬಸವಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ನಡೆಸಲಾಯಿತು. ಇದೇ ವೇಳೆ ಕನೇರಿ ಸ್ವಾಮೀಜಿ ಪ್ರತಿಕೃತಿ ದಹಿಸಿ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು,
ಕೂಡಲೇ ಕೊಲ್ಲಾಪುರ-ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳು ಬಹಿರಂಗವಾಗಿ ಕ್ಷಮೆ ಕೇಳಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚಿರಿಕೆ ನೀಡಿದರು.

ಈ ವೇಳೆ ಬಸವನಬಾಗೇವಾಡಿ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಮಸಬಿನಾಳದ ಸಿದ್ರಾಮ ಸ್ವಾಮೀಜಿ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ