Breaking News

ಧರ್ಮೇಗೌಡರ ಹಠಾತ್ ನಿಧನ; ಸಹಕಾರಿ ಕ್ಷೇತ್ರವೂ ಬಡವಾಗಿದೆ; ಸಂತಾಪ ಸೂಚಿಸಿದ ಸಚಿವ ರಮೇಶ್ ಜಾರಕಿಹೊಳಿ‌

Spread the love

ಬೆಂಗಳೂರು(ಡಿ.29): ಕರ್ನಾಟಕ ವಿಧಾನಪರಿಷತ್ತಿನ ಉಪಸಭಾಪತಿಯಾಗಿದ್ದ  ಎಸ್ ಎಲ್ ಧರ್ಮೇಗೌಡ ರ ಹಠಾತ್ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಜ್ಜನ ವ್ಯಕ್ತಿಯಾಗಿದ್ದ ಧರ್ಮೇಗೌಡ ರು ಬೀರೂರು ಕ್ಷೇತ್ರದ ಶಾಸಕರಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಸಹಕಾರಿ ರಂಗದ ಹಿರಿಯ ಧುರೀಣರಾಗಿದ್ದರು. ಇತ್ತೀಚಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಉಪ ಸಭಾಪತಿಗಳಾಗಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೂಕ್ಷ್ಮ ಮನಸ್ಸಿನ ರಾಜಕಾರಿಣಿಯನ್ನು ಕಳೆದುಕೊಂಡ ನಾಡು ಬಡವಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.ಎಸ್.ಎಲ್. ಧರ್ಮೇಗೌಡರ ನಿಧನದಿಂದ ಮನಸ್ಸಿಗೆ ತೀವ್ರ ನೋವುಂಟಾಗಿದ್ದು, ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಹಾಗೂ ನನ್ನ ಆತ್ಮೀಯ ಸ್ನೇಹಿತರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ, ಕಾರ್ಯಕರ್ತರಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ‌ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಉಪಸಭಾಪತಿ ನಿಧನಕ್ಕೆ ಸಿಎಂ ಬಿಎಸ್​ ಯಡಿಯೂರಪ್ಪ ಸೇರಿದಂತೆ ಅನೇಕ ರಾಜಕೀಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ. ವಿಧಾನ ಪರಿಷತ್ ಉಪಸಭಾಪತಿ ಎಸ್​.ಎಲ್​.ಧರ್ಮೇಗೌಡರು ನಿನ್ನೆ ತಡರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಆದರೆ ಇತ್ತೀಚೆಗೆ ವಿಧಾನಪರಿಷತ್​ನಲ್ಲಿ ನಡೆದ ಎಳೆದಾಟ ತಳ್ಳಾಟ ಘಟನೆಯಿಂದ ಧರ್ಮೇಗೌಡರು  ನೊಂದಿದ್ದರು ಎನ್ನಲಾಗಿದೆ. ಅಷ್ಟೇ ಅಲ್ಲದೇ ಮಾನಸಿಕವಾಗಿಯೂ ಕುಗ್ಗಿದ್ದರು ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ