Breaking News

ಮನೆಯಲ್ಲೇ ಬಾಲಕಿ, ಯುವಕ ಆತ್ಮಹತ್ಯೆಗೆ ಶರಣು: ಮೃತದೇಹ ತೆರವುಗೊಳಿಸಿದ ಸಮಾಜ ಸೇವಕ ನಿತ್ಯಾನಂದ‌ ಒಳಕಾಡು

Spread the love

ಉಡುಪಿ: ಯುವಪ್ರೇಮಿಗಳಿಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ಗುರುವಾರ ಸಂಜೆ ನಡೆದಿದೆ.

ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಬಾಲಕಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತ ಬಾಲಕಿ ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ, ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಎಂದು ತಿಳಿದು ಬಂದಿದೆ.

ನಗರ ಪೊಲೀಸ್​​ ಠಾಣೆಯ‌ ಎಸ್ಐ ಭರತೇಶ್, ಎಎಸ್ಐ ಪರಮೇಶ್ವರ್ .ಕೆ., ಎಎಸ್​ಐ ರಮೇಶ್, ಮುಖ್ಯ ಆರಕ್ಷಕ ಜಯಕರ್ ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ‌ ಒಳಕಾಡು ಎರಡು ಮೃತದೇಹಗಳನ್ನು ತೆರವುಗೊಳಿಸಿ ಆ್ಯಂಬುಲೆನ್ಸ್​ ವಾಹನದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ಪೊಲೀಸ್​​ ಇಲಾಖೆಗೆ ನೆರವು ನೀಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಈಟಿವಿ ಜೊತೆ ಮಾತನಾಡಿರುವ ಸಮಾಜಸೇವಕ ನಿತ್ಯಾನಂದ ಒಳಕಾಡು, “ಇಬ್ಬರೂ ಹೊರ ಜಿಲ್ಲೆಗಳಿಂದ ವಲಸೆ ಬಂದ ಕುಟುಂಬಕ್ಕೆ ಸೇರಿದವರು. ಯುವಕ ಸ್ವತಃ ಕೂಲಿ ಕಾರ್ಮಿಕನಾಗಿದ್ದಾನೆ. ಇಬ್ಬರೂ ಬಡವರು. ಇವರಿಬ್ಬರ ನಡುವೆ ಪ್ರೀತಿ ಪ್ರೇಮ ಇತ್ತು. ಆದರೆ, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿಲ್ಲ” ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ