ವಿಜಯಪುರಕನ್ನೇರಿ ಶ್ರೀ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ; ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಆ್ಯಂಕರ್: ಕನ್ನೇರಿ ಶ್ರೀ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಬೃಹತ್ ಹೋರಾಟ ನಡೆಯಿತು.
ಭಕ್ತರು ಕನ್ನೇರಿ ಶ್ರೀ ಪರ ಬೃಹತ್ ರ್ಯಾಲಿ ನಡೆಸಿದರು. ಅಪಾರ ಸಂಖ್ಯೆಯಲ್ಲಿ ಸೇರಿದ ಬೆಂಬಲಿಗರು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಡಾ.ಸುರೇಶ ಬಿರಾದಾರ ಮತ್ತಿತರರ ನಾಯಕರ ನೇತೃತ್ವದಲ್ಲಿ ಹಿಂದೂ ಪರ ಸಂಘಟನೆಗಳ
ಕಾರ್ಯಕರ್ತರು, ಬಿಜೆಪಿ ಮುಖಂಡರು ಸೇರಿ ಅನೇಕರು ಭಾಗಿಯಾಗಿದ್ದರು. ಇಂದು ನಡೆಯುತ್ತಿರುವ ಸಿದ್ದರಾಮೇಶ್ವರ ಸಪ್ತಾಹ ಕಾರ್ಯಕ್ರಮದಲ್ಲಿ
ಕನ್ನೇರಿ ಶ್ರೀಗಳು ಪಾಲ್ಗೊಳ್ಳಬೇಕಿತ್ತು. ಜಿಲ್ಲಾ ಪ್ರವೇಶ ನಿರ್ಬಂಧ ಹಿನ್ನೆಲೆ ಭಕ್ತರು, ಬೆಂಬಲಿಗರು ಪ್ರತಿಭಟನೆ ನಡೆಸಿದರು.