Breaking News

ಕಬ್ಬು ಬೆಳೆಗಾರ ರೈತರೊಂದಿಗೆ ಧಾರವಾಡ ಜಿಲ್ಲಾಧಿಕಾರಿಗಳ ಸಭೆ..

Spread the love

ಕಬ್ಬು ಬೆಳೆಗಾರ ರೈತರೊಂದಿಗೆ ಧಾರವಾಡ ಜಿಲ್ಲಾಧಿಕಾರಿಗಳ ಸಭೆ…..ಕಬ್ಬು ಸಾಗಾಣಿಕೆ ವೆಚ್ಚ ನಿಗದಿಗೆ ಡಿಸಿ ಕ್ರಮದ ಭರವಸೆ.
: ನಿರಂತರ ಹೋರಾಟದ ಫಲವಾಗಿ ಕಬ್ಬು ಬೆಳೆದ ರೈತರು ನಿಟ್ಟುಸಿರು ಬಿಡುವಂತಾಗಿದೆ. ಕಲಘಟಗಿ ಭಾಗದ ರೈತರೊಂದಿಗೆ ಕಬ್ಬು ಸಾಗಾಣಿಕೆ ದರ ನಿಗದಿ ಬಗ್ಗೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಸಭೆ ಜರುಗಿಸಿ, ಕಬ್ಬು ಸಾಗಾಣಿಕೆ ವೆಚ್ಚ ನಿಗದಿಗೆ ಕ್ರಮದ ಭರವಸೆ ನೀಡಿದ್ದಾರೆ.
ಹೌದು ಧಾರವಾಡ ಜಿಲ್ಲಾಧಿಕಾರಿ ಸಭಾ ಭವನದಲ್ಲಿ ಕಬ್ಬು ಬೆಳೆಯುವ ರೈತರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ಸಮಸ್ಯೆಗಳನ್ನು ಆಲಿಸಿದರು. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಇನ್ನೂ ಕಲಘಟಗಿ ಅಳ್ನಾವರ ಭಾಗದಲ್ಲಿ ಹೆಚ್ಚಾಗಿ ಕಬ್ಬು ಬೆಳೆಗಾರರು ಇದ್ದು, ಕಬ್ಬು ಬೆಳೆಗಾರರ ಸಂಕಷ್ಟ ದೂರ ಮಾಡಲು ಇದೀಗ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಸಭೆಯಲ್ಲಿ ಮಾತನಾಡಿ, ಕಲಘಟಗಿ ತಹಶೀಲ್ದಾರ ಮತ್ತು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಜಿಲ್ಲಾಡಳಿತ ನೀಡಿರುವ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಜಿಲ್ಲೆಯ ಎಲ್ಲ ಕಾರ್ಖಾನೆಗಳು ಕಬ್ಬು ಕಟಾವಣೆಯ ದರವನ್ನು ಸರ್ಕಾರದ ನಿಯಮಾನುಸಾರ ತೆಗೆದುಕೊಳ್ಳಬೇಕು. ನಿಯಮಾನುಸಾರ ತೆಗೆದುಕೊಳ್ಳದೇ ಇರುವದರಿಂದ ರೈತರಿಗೆ ಬಹಳಷ್ಟು ತೊಂದರೆಯಾಗುತ್ತಿದೆ.
ಅದೇ ರೀತಿ ಪ್ಯಾರಿ ಶುಗರ್ ಕಾರ್ಖಾನೆಯವರು ಸಹ ನಿಯಮಾನುಸಾರ ಹಣ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು. ಬೇರೆ ಪ್ಯಾಕ್ಟರಿ ಸಿಬ್ಬಂದಿಗಳು ರೈತರಿಗೆ ತಪ್ಪು ಮಾಹಿತಿ ನೀಡದಂತೆ ಕ್ರಮವಹಿಸಬೇಕು. ಕಬ್ಬಿಗೆ ಮತ್ತು ಕಬ್ಬು ಸಾಗಾಣಿಕೆಯಲ್ಲಿ ನ್ಯಾಯಯುತ ದರ ನೀಡುವಲ್ಲಿ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶಾಲಂ ಹುಸೇನ್,
ಆಹಾರ ಇಲಾಖೆ ಜಂಟಿ ನಿರ್ದೇಶಕ ಡಾ.ವಿನೋದ ಹೆಗ್ಗಳಗಿ, ಕಲಘಟಗಿ ತಹಶಿಲ್ದಾರ ಬಸವರಾಜ ಹೊಂಕಣದವರ, ರೈತ ಮುಖಂಡರಾದ ಮಹೇಶ ಬೆಳಗಾಂವಕರ್, ಉಳವಪ್ಪಾ ಬಡಿಗೇರ, ವಸಂತ ಲಕ್ಕಪ್ಪನವರ, ಪರುಶುರಾಮ ಎತ್ತಿನಗುಡ್ಡ, ಶಿವು ತಡಸ, ಬಸನಗೌಡ ಸಿದ್ದನಗೌಡರ ಸೇರಿದಂತೆ ಇತರ ರೈತ ಪ್ರಮುಖರು, ಅಧಿಕಾರಿಗಳು ಭಾಗವಹಸಿದ್ದರು.

Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ