Breaking News

ಕಂದಕಕ್ಕೆ ಉರುಳಿದ ಸಾರಿಗೆ ಬಸ್; 49 ಪ್ರಯಾಣಿಕರಿಗೆ ಗಾಯ

Spread the love

ಕಾರವಾರ(ಉತ್ತರ ಕನ್ನಡ): ಸಾರಿಗೆ ಸಂಸ್ಥೆಯ ಬಸ್​​ವೊಂದು ಕಂದಕಕ್ಕೆ ಉರುಳಿ ಬಿದ್ದು ಮೂರು ಬಾರಿ ಪಲ್ಟಿಯಾದ ಪರಿಣಾಮ ಚಾಲಕ, ನಿರ್ವಾಹಕ ಸೇರಿ 49 ಪ್ರಯಾಣಿಕರು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ರಾತ್ರಿ ಅಂಕೋಲಾ ತಾಲೂಕಿನ ವಡ್ಡಿ ಘಾಟ್ ತಿರುವಿನಲ್ಲಿ ಸಂಭವಿಸಿದೆ.

ಕುಮಟಾ-ಶಿರಸಿ ರಸ್ತೆ ಕಾಮಗಾರಿಯ ನಿಮಿತ್ತ ಸಂಚಾರ ಬಂದ್​​​ ಮಾಡಲಾಗಿದ್ದು, ಶಿರಸಿಗೆ ಪ್ರಯಾಣಿಸುವ ಬಸ್‌ ಮಾರ್ಗವನ್ನು ವಡ್ಡಿ ಮೂಲಕ ಸಂಚರಿಸುವಂತೆ ಬದಲಿಸಲಾಗಿತ್ತು. ರಾಜ್ಯ ಹೆದ್ದಾರಿಯಾದ ಇದರ ಘಟ್ಟದ ಪ್ರದೇಶದಲ್ಲಿ ಭಾರಿ ತಿರುವುಗಳಿದ್ದು, ತೀರಾ ಅಪಾಯಕಾರಿಯಾಗಿವೆ. ಈ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಬಸ್ ಉರುಳಿ ಕಂದಕಕ್ಕೆ ಬಿದ್ದಿದೆ. ಈ ಸಂದರ್ಭದಲ್ಲಿ ಬಸ್​​ನಲ್ಲಿ ಒಟ್ಟು 49 ಮಂದಿ ಇದ್ದರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಅವರನ್ನು ಮೆಲಕ್ಕೆತ್ತಿ ಖಾಸಗಿ ವಾಹನಗಳ ಮೂಲಕ ಅಂಕೋಲಾ ಮತ್ತು ಕುಮಟಾ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಈ ಬಸ್ ಕುಮಟಾ ಘಟಕಕ್ಕೆ ಸೇರಿದೆ. ಬಳ್ಳಾರಿಯಿಂದ ಕುಮಟಾ ಕಡೆಗೆ ತೆರಳುತ್ತಿತ್ತು. ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಡ್ಡಿ ಘಾಟ್ ಪ್ರದೇಶದ ತಿರುವುಗಳು ಅಪಾಯಕಾರಿ ಸ್ವರೂಪದಲ್ಲಿರುವ ಹಿನ್ನೆಲೆಯಲ್ಲಿ, ರಸ್ತೆ ಅಗಲೀಕರಣ ಮತ್ತು ದುರಸ್ತಿಗೊಳಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಹಾಗೂ ಜಿ.ಪಂ ಸದಸ್ಯ ಜಿ.ಎಂ.ಶೆಟ್ಟಿ ಅವರು ಆಗ್ರಹಿಸಿದ್ದಾರೆ. ಈ ಕುರಿತು ಅಂಕೋಲಾ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ