Breaking News

ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ

Spread the love

ಹಾವೇರಿ : ಆರ್​​ಟಿಸಿ ದುರಸ್ತಿ ಮಾಡಿಕೊಡಲು 12 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.

ಶಿರಸ್ತೇದಾರ ತಮ್ಮಣ್ಣ ಕಾಂಬಳೆ, ದ್ವಿತೀಯ ದರ್ಜೆ ಸಹಾಯಕರುಗಳಾದ ಗೂಳಪ್ಪ ಮನಗೂಳಿ ಹಾಗೂ ಶಿವಾನಂದ ಬಡಿಗೇರ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಬೊಮ್ಮನಹಳ್ಳಿ ಗ್ರಾಮದ ಶಂಕ್ರಪ್ಪ ಗುಮಗುಂಡಿ ಎಂಬುವರ ಆರ್​ಟಿಸಿ ದುರಸ್ತಿ ಮಾಡಿಕೊಡಲು ಆರೋಪಿಗಳು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ನವೀನ ಪಾಟೀಲ ಎಂಬುವರು ನೀಡಿದ ದೂರಿನ ಮೇರೆಗೆ ದಾಳಿ ನಡೆಸಿ ಮೂವರನ್ನು ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ. ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಧನ ಸಚಿವರ ವಿಶೇಷಾಧಿಕಾರಿ ಲೋಕಾಯುಕ್ತ ಬಲೆಗೆ : ಇದೇ ರೀತಿ ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕಕ್ಕೆ ಅನುಮತಿ (ಎನ್​ಒಸಿ) ನೀಡಲು ಲಂಚ ಪಡೆಯುತ್ತಿದ್ದ ಇಂಧನ ಸಚಿವರ ವಿಶೇಷಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು‌ ಅಕ್ಟೋಬರ್ 5 ರಂದು ಬಂಧಿಸಿದ್ದರು. 50 ಸಾವಿರ ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಜ್ಯೋತಿ ಪ್ರಕಾಶ್ ಹಾಗೂ ಅವರ ಕಾರು ಚಾಲಕ ನವೀನ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದರು.

ಕೆ‍ಪಿಟಿಸಿಎಲ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿರುವ ಜ್ಯೋತಿ ಪ್ರಕಾಶ್‌ ಅವರು, ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ವಿಶೇಷಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಬ್ಯಾಡರಹಳ್ಳಿಯ ನಿವಾಸಿಯಾದ ಕೆ.ಎಂ. ಅನಂತರಾಜು ಅವರು ಬಡಾವಣೆ ನಿರ್ಮಾಣ ಕಾಮಗಾರಿಗೆ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದರು. ಆದರೆ ಇದಕ್ಕೆ ಎನ್‌ಒಸಿ ನೀಡಲು ಜ್ಯೋತಿ ಪ್ರಕಾಶ್ ಅವರು 1 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಕುರಿತು ಅನಂತರಾಜು ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಈ ದೂರಿನನ್ವಯ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜು ನೇತೃತ್ವದ ತಂಡ ಅನಂತರಾಜು ಅವರಿಂದ 50 ಸಾವಿರ ರೂ. ಸ್ವೀಕರಿಸುತ್ತಿದ್ದ ವೇಳೆ ಜ್ಯೋತಿ ಪ್ರಕಾಶ್‌ ಮತ್ತು ಅವರ ಚಾಲಕ ನವೀನ್‌ನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ