Breaking News

ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ನಾಳೆಯಿಂದಲೇ ಕಬ್ಬು ನುರಿಸಲು ಅನುಮತಿ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್​ ಹೇಳಿದ್ದಾರೆ.

Spread the love

ಬೆಂಗಳೂರು : ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ಅ. 20 ರಿಂದಲೇ ಕಬ್ಬು ಕ್ರಷಿಂಗ್‌ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಈ ಆದೇಶ ಮಾಡಲಾಗಿದೆ. ಈ ಮೊದಲು ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಜೂನ್‌ 22ರಿಂದ ಹಾಗೂ ಬೆಳಗಾವಿ, ವಿಜಯಪುರ, ಬೀದರ್‌, ಕಲಬುರಗಿ, ಬಾಗಲಕೋಟೆ, ಗದಗ, ಯಾದಗಿರಿ, ದಾವಣಗೆರೆ, ಉತ್ತರ ಕನ್ನಡ, ಬಳ್ಳಾರಿ, ವಿಜಯನಗರ ಮತ್ತು ಹಾವೇರಿ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳಿಗೆ ನ. 1ರಿಂದ ಕಬ್ಬು ನುರಿಸುವಿಕೆ ಆರಂಭಿಸಬೇಕು ಎಂದು ನಿರ್ಧರಿಸಲಾಗಿತ್ತು ಎಂದಿದ್ದಾರೆ.

ಕಬ್ಬು ಕಟಾವಿಗೆ ಬಂದಿದ್ದು, ನವೆಂಬರ್‌ 1ರವರೆಗೆ ಕ್ರಷಿಂಗ್‌ ಆರಂಭಿಸದಿದ್ದರೆ ಸಕ್ಕರೆ ಇಳುವರಿ ಕಡಿಮೆಯಾಗಲಿದೆ. ರೈತರಿಗೂ ಸಮಸ್ಯೆಯಾಗಲಿದೆ, ಬೇಗ ಆರಂಭಿಸಲು ಅನುಮತಿ ನೀಡಬೇಕು ಎಂದು ಉತ್ತರ ಕರ್ನಾಟಕದ ಹಲವು ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಹಾಗೂ ರೈತ ಮುಖಂಡರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಅ. 20ರಿಂದಲೇ ಕ್ರಷಿಂಗ್‌ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಳೆಯ ಮೈಸೂರು ಹಾಗೂ ಇತರ ಜಿಲ್ಲೆಗಳಿಗೆ ಪ್ರತ್ಯೇಕ ಕಬ್ಬು ನುರಿಸುವಿಕೆ ದಿನಾಂಕ ನಿಗದಿಪಡಿಸಲು ಆರಂಭಿಸಲಾಗಿದೆ. ಇದರಿಂದ ಕಾರ್ಖಾನೆಗಳ ನಡುವೆ ಅನಾರೋಗ್ಯಕರ ಪೈಪೋಟಿಯನ್ನು ನಿವಾರಣೆ ಮಾಡಲು ಸಾಧ್ಯವಾಗಿದೆ. ಹಾಗೂ ಸಕ್ಕರೆ ಇಳುವರಿ ಪ್ರಮಾಣದಲ್ಲೂ ಹೆಚ್ಚಳವಾಗಿದೆ ಎಂದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ