Breaking News

ದೀಪಾವಳಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ

Spread the love

ಚಿಕ್ಕೋಡಿ (ಬೆಳಗಾವಿ) : ನಾನು ಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗುತ್ತೇನೆ ಎಂದು ಎಲ್ಲಿಯೂ ಕೂಡಾ ಹೇಳಿಲ್ಲ, ನಾನು ಅಪೇಕ್ಷಿತನಲ್ಲ, ಸಹಕಾರಿ ರಂಗದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಅಪೆಕ್ಸ್ ಬ್ಯಾಂಕಿನ ಉಪಾಧ್ಯಕ್ಷನಾಗಿದ್ದೇನೆ. ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸಿದ್ದೇನೆ. ಜೊತೆಗೆ ಸಹಕಾರಿ ಸಚಿವನಾಗಿ ಕೆಲಸವನ್ನು ಮಾಡಿದ್ದೇನೆ, ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದೇನೆ. ಹೋಗಿ ಮತ್ತೆ ಜಿಲ್ಲಾ ಮಧ್ಯವರ್ತಿ ಬ್ಯಾಂಕಿನ ಅಧ್ಯಕ್ಷನಾಗುವ ಭ್ರಮೆ ನನಗೆ ಇಲ್ಲ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ 50 ಕೋಟಿ ರೂ. ಸವಾಲಿಗೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ತಿರುಗೇಟು ನೀಡಿದ್ದಾರೆ.

ಅವರು ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡುತ್ತಾ, ಕ್ಷೇತ್ರದ ಜನತೆ ನನ್ನನ್ನು ತುಂಬಾ ಎತ್ತರಕ್ಕೆ ಬೆಳೆಸಿದ್ದಾರೆ. ನಾನು ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗುತ್ತೇನೆಂದು ಎಲ್ಲೂ ಹೇಳಿಲ್ಲ, ಚುನಾವಣೆ ನಿನ್ನೆ ಮುಗಿದಿದೆ, ಇನ್ನೂ ನಾಲ್ಕು ಕ್ಷೇತ್ರಗಳ ಫಲಿತಾಂಶ ಬಾಕಿಯಿದೆ. ಅದು ನ್ಯಾಯಾಲಯದಲ್ಲಿ ಇರುವುದರಿಂದ ಕೋರ್ಟ್​ನಿಂದ ತೀರ್ಪು ಬಂದ ನಂತರ ಘೋಷಣೆಯಾಗುತ್ತದೆ. ನಂತರ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಆ ಸಂದರ್ಭಕ್ಕೆ ಅನುಗುಣವಾಗಿ ಅವತ್ತು ನಾವು ಮಾತನಾಡಬೇಕಾಗುತ್ತದೆ. ರಾಜಕಾರಣ ಯಾವತ್ತೂ ನಿಂತ ನೀರಲ್ಲ, ಹರಿಯುತ್ತಿರುತ್ತದೆ. ರಾಜಕಾರಣದಲ್ಲಿ ಯಾರೂ ಶತ್ರುಗಳೂ ಇರಲ್ಲ, ಮಿತ್ರರೂ ಇರಲ್ಲ. ವೈರಿಗಳು ಮಿತ್ರರಾಗುತ್ತಾರೆ, ಕಾಲಾನುಸಾರ ಸಂದರ್ಭ ಬಂದಾಗ ಚರ್ಚೆ ಮಾಡುತ್ತೇನೆ ಎಂದಿದ್ದಾರೆ.

ರಮೇಶ್ ಕತ್ತಿ ಹಾಗೂ ಜಾರಕಿಹೊಳಿ ಪೆನಲ್​​ನಿಂದ ಯಾರು ಅಧ್ಯಕ್ಷರಾಗಿರುತ್ತಾರೆ ಎಂಬುದು ಇನ್ನೂ ಕಾದು ನೋಡಬೇಕೆಂದು ಹೇಳಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ