ಕಾಂಗ್ರೆಸ್ ಸರ್ಕಾರ ಇಲ್ಲಿ ಲೂಟಿ ಮಾಡಿ ಬಿಹಾರ ಚುನಾವಣೆಗೆ ಹಣ ಕಳಿಸುತ್ತಿದ್ದಾರೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್
ಕಾಂಗ್ರೆಸ್ ಆರ್.ಎಸ್.ಎಸ್ ಸಂಘವನ್ನು ಎದುರು ಹಾಕಿಕೊಂಡಿದ್ದೀರಾ, ಭಸ್ಮ ಆಗ್ತೀರಾ, ಇದು ನಿಮ್ಮ ಅಂತ್ಯದ ಆರಂಭ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿಮಿಡಿಗೊಂಡರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಎಟಿಎಂ ಇದ್ದಂತೆ, ಇಲ್ಲಿ ಲೂಟಿ ಮಾಡಿ ಬಿಹಾರ ಚುನಾವಣೆಗೆ ಹಣ ಕಳಿಸುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.
ನಗರದಲ್ಲಿ ಮಾತನಾಡಿದ ಅವರುಇತ್ತಿಚೆಗೆ ಸಿಎಂ ಸಿದ್ಧರಾಮಯ್ಯ ಅವರು ಆಡಳಿತದಲ್ಲಿ ಬಿಗಿ ಕಳೆದುಕೊಂಡಿದ್ದಾರೆ. ಕಾನೂನು ಸುವ್ಯವಸ್ಥೆ, ಆರ್ಥಿಕತೆ ಕುಸಿದಿದೆ ಭ್ರಷ್ಟಾಚಾರ ಮಿತಿ ಮೀರಿದೆ.
ಗುತ್ತಿಗೆದಾರರ ಆರೋಪಕ್ಕೆ ಕೋರ್ಟ್ ಗೆ ಹೋಗಲಿ ಅಂತರಾ ಸಿಎಂ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಇಲಾಖೆ ಬಗ್ಗೆ ಕಾಳಜಿ ವಹಿಸೋದನ್ನು ಬಿಟ್ಟು ಆರ್.ಎಸ್. ಎಸ್ ಬಗ್ಗೆ ಮಾತನಾಡುತ್ತಾರೆ.
ಇವರಿಗೆ ಆರ್.ಎಸ್.ಎಸ್ ಬಗ್ಗೆ ಮಾತನಾಡೋಕೆ ನೈತಿಕತೆ ಇದೆಯಾ ಎಂದ ಅವರು ಆರ್.ಎಸ್.ಎಸ್ ಬಗಯ ಮಾತನಾಡೋಕೆ ನೈತಿಕತೆ ಇದೆ? ಸಾರ್ವಜನಿಕ ಸ್ಥಳಯ ಆರ್.ಎಸ್.ಎಸ್ ನಿಷೇಧದ ಬಗ್ಗೆ ಪತ್ರ ಬರೆದ್ರಿ, ಈ ಕುರಿತು ಸಿಎಂ ಏನು ಕ್ರಮ ತಗೆದುಕೊಂಡಿದ್ದಾರೆ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಆ್ಯಂಡ್ ಕಂಪನಿ ಹಿಂದೂ ಸಮಾಜವನ್ನು ಒಡೆಯುವ ಕೆಲಸ ಮಾಡ್ತಾ ಇದೆ ಎಂದು ಅವರು ದೂರಿದರು.
Laxmi News 24×7